Monday, November 25, 2024
ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಹೆಚ್ಚುವರಿ 1800 ಕೆಎಸ್‍ಆರ್‍ ಟಿಸಿ ವಿಶೇಷ ಬಸ್ ವ್ಯವಸ್ಥೆ – ಕಹಳೆ ನ್ಯೂಸ್

ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳ ಹಾಗೂ ಇತರೇ ರಾಜ್ಯಗಳ ಊರುಗಳಿಗೆ ತೆರಳಲು ಕೆಎಸ್‍ಆರ್‍ ಟಿಸಿ ಹೆಚ್ಚುವರಿಯಾಗಿ 1800 ವಿಶೇಷ ಬಸ್ ವ್ಯವಸ್ಥೆ ಮಾಡಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಕಡೆಗೆ ಬಸ್ ಹೊರಡಲಿವೆ.
ಮೈಸೂರು ರಸ್ತೆ ಸ್ಯಾಟ್‍ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹಾಗೂ ಶಾಂತಿನಗರ ಬಿಎಂಟಿಸಿಯಿಂದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಹವಾನಿಯಂತ್ರಣ ಬಸ್ ಕಾರ್ಯಾಚರಣೆಗೊಳ್ಳಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು