Sunday, November 24, 2024
ಸುದ್ದಿ

ಗಣೇಶ ಹಬ್ಬದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ. ಯಿಂದ ಒಳ್ಳೆ ಆಫರ್ – ಕಹಳೆ ನ್ಯೂಸ್

ಬೆಂಗಳೂರು: ಗೌರಿ ಗಣೇಶ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆ.ಎಸ್.ಆರ್.ಟಿ.ಸಿ. ಯಿಂದ 1800 ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾದಲಾಗಿದೆ.

ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳು ಮತ್ತು ಅಕ್ಕ-ಪಕ್ಕದ ರಾಜ್ಯಗಳಿಗೆ ಕೆ.ಎಸ್.ಆರ್.ಟಿ.ಸಿ. ಬಸ್‍ಗಳು ಸಂಚಾರ ನಡೆಸಲಿವೆ. ಜೊತೆಗೆ ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್ 2ರಂದು ವಿಶೇಷ ವಾಹನಗಳು ಸಂಚರಿಸಲಿವೆ ಎಂದು ಸಂಸ್ಥೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಮತ್ತು ತಿರುಪತಿಗೆ ಬಸ್ಸು ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೈಸೂರು ರಸ್ತೆ ಬಸ್ಸು ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಸಂಚಾರ ಮಾಡಲಿವೆ.

ಬೆಂಗಳೂರು ನಗರದ ಶ್ರೀ ಬಸವೇಶ್ವರ ಬಸ್ ನಿಲ್ದಾಣ, ವಿಜಯನಗರ, ಜಯನಗರ 4ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್(ರಾಜಾಜಿನಗರ), ಮಲ್ಲೇಶ್ವರಂ 8ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್ ಭೀಮಾನಗರ, ಐಟಿಐ ಗೇಟ್, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಇನ್ನೂ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಮುಂಚಿತವಾಗಿ ಬುಕ್ಕಿಂಗ್ ಮಾಡಿದಲ್ಲಿ ರಿಯಾಯಿತಿ ನೀಡಲಾಗಿದೆ.