Sunday, November 24, 2024
ರಾಜಕೀಯ

ಬೆಂಗಳೂರಿನಲ್ಲಿ ಫಿಟ್ ಇಂಡಿಯಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ – ಕಹಳೆ ನ್ಯೂಸ್

ಬೆಂಗಳೂರು: ಕ್ರೀಡಾಪಟುಗಳಿಗೆ ಅಗತ್ಯವಾದ ಆರ್ಥಿಕ ನೆರವು ಒದಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ರಾಷ್ಟ್ರೀಯ ಕ್ರೀಡಾದಿನ ಆಚರಣೆ ಹಾಗೂ ಸದೃಢ ಭಾರತ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡಾಪಟುಗಳಿಗೆ ನಮ್ಮ ಸರ್ಕಾರ ಅಗತ್ಯವಾದ ಪ್ರೋತ್ಸಾಹ ನೀಡಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರ ಮೊದಲ ಭಾಗವಾಗಿ ಆಟಗಾರರಿಗೆ ಆರ್ಥಿಕ ನೆರವು ನೀಡಲು ಚಿಂತನೆ ನಡೆಸಿದ್ದೇನೆ. ಇದು ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕ್ರೀಡಾ ದಿನಾಚರಣೆ ನಡೆಯುತ್ತಿರುವುದು ಪ್ರಶಂಸನೀಯ. ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸಿರುತ್ತದೆ. ನಾವು ಎಷ್ಟೇ ಒತ್ತಡಗಳಿದ್ದರೂ ದಿನದ 24 ಗಂಟೆಯಲ್ಲಿ ಕೆಲವು ತಾಸುಗಳಾದರೂ ಆರೋಗ್ಯಕ್ಕಾಗಿ ಗಮನಕೊಡಬೇಕೆಂದು ಸಲಹೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ಪರಂಪರೆಗಳನ್ನು ಮುಂದುವರೆಸುವ ಕೈಂಕರ್ಯದಲ್ಲಿ ತೊಡಗಿದ್ದಾರೆ. ಅವರಿಗೆ ಪ್ರತಿಯೊಬ್ಬರು ಕೈಜೋಡಿಸುವ ಅಗತ್ಯವಿದೆ ಎಂದರು.

ಇದಕ್ಕೂ ಮುನ್ನ ಖ್ಯಾತ ಹಾಕಿ ಆಟಗಾರ ಧ್ಯಾನ್‍ಚಂದ್ ಭಾವಚಿತ್ರಕ್ಕೆ ಬಿಎಸ್‍ವೈ ಪುಷ್ಪನಮನ ಸಲ್ಲಿಸಿ ಭಾರತದ ಒಲಿಂಪಿಕ್‍ನಲ್ಲಿ ಗೆಲುವು ಸಾಧಿಸಲು ಇವರ ಕೊಡುಗೆ ಅವಿಸ್ಮರಣೀಯ ಎಂದರು.

ಅಭಿಯಾನದಲ್ಲಿ ನಾನಾ ಕಾಲೇಜುಗಳ ಕ್ರೀಡಾಪಟುಗಳು ಭಾಗಿಯಾಗಿದ್ದರು. ಕ್ರೀಡಾಪಟುಗಳ ಸಾಹಸವನ್ನು ನೋಡಿ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದರು. ಸಚಿವರಾದ ಬಸವರಾಜ್ ಬೊಮ್ಮಾಯಿ, ಸಿ.ಟಿ.ರವಿ ಮತ್ತಿತರರು ಹಾಜರಿದ್ದರು.