ಪುತ್ತೂರು: ಮಂಗಳೂರು ವಿವಿಯು ಕಳೆದ ಮೇ ತಿಂಗಳಲ್ಲಿ ನಡೆಸಿದ ಸ್ನಾತಕೋತ್ತರ ವಿಭಾಗದ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಅಂತಿಮ ಸೆಮಿಸ್ಟರ್ ಹಾಗೂ ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ ಒಟ್ಟು 105 ವಿದ್ಯಾರ್ಥಿಗಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 100 ಫಲಿತಾಂಶ ಬಂದಿರುತ್ತದೆ.
ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಎಲ್ಲಾ 58 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರಲ್ಲಿ ನವ್ಯ ಭಟ್ ಮತ್ತು ಅಪರ್ಣಾ ಜಿ ಸರಾಸರಿ 85 ಅಂಕಗಳೊಂದಿಗೆ ಪ್ರಥಮ ಸ್ಥಾನ ಗಳಿಸಿದರೆ, ದೀಕ್ಷಿತಾ ರೈ ಸರಾಸರಿ 84 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ 47 ವಿದ್ಯಾರ್ಥಿಗಳು ಹಾಜರಾಗಿ, 45 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಮತ್ತು 2 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಲ್ಲಿ ಜೊಶೀಲ ಮಿನೇಜಸ್ ಶೇಕಡಾ 85 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದರೆ, ನವ್ಯಶ್ರೀ ರೈ ಶೇಕಡಾ 82 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.