ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ 2019-20 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ರವೀಂದ್ರ ಬಿ. ಕೆ. ಅವರು ದೀಪವನ್ನು ಬೆಳಗಿಸುವುದರ ಮೂಲಕ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಪುಣ್ಯದ ಕೆಲಸ. ಇದರ ಶಿಬಿರಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಭಾಂದವ್ಯ ಹೆಚ್ಚುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಳ್ಳಬೇಕು. ಈಗಿನ ಪ್ರಧಾನಿಯವರ, ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಮಾತಿನಂತೆ ಜಾತಿ ಧರ್ಮ ಭೇದಗಳನ್ನು ಮರೆತು ರಾಷ್ಟ್ರೀಯ ಭಾವೈಕ್ಯತೆಯನ್ನು ಹೆಚ್ಚಿಸಬೇಕು. ಅದರ ಜೊತೆಗೆ ಪರಿಸರ ಸಂರಕ್ಷಣೆಯತ್ತ ಗಮನಹರಿಸಬೇಕು. ಆಗ ಮಾತ್ರ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂದು ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪುಷ್ಪರಾಜ್ ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾನೂನು ಕಾಲೇಜಿನ ಸಂಚಾಲಕ ವಿಜಯನಾರಾಯಣ ಕೆ. ಎಂ. ಮಾತನಾಡಿ, ಶಿಕ್ಷಣ ಎಂಬುದು ಕೇವಲ ಕಾಲೇಜಿನ ಆವರಣಕ್ಕೆ ಸೀಮಿತವಾಗದೇ, ಸಾಮಾಜಿಕ ಜೀವನದಿಂದಲೂ ಪಡೆದುಕೊಳ್ಳಬಹುದು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೊಜನೆ ಮಹತ್ವ ಪಡೆದುಕೊಳ್ಳುತ್ತದೆ. ಇದು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ತುಂಬುತ್ತದೆ. ಆದುದರಿಂದ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ನಂತರ ಎರಡು ವರ್ಷಗಳಿಂದ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡ ವಿದ್ಯಾರ್ಥಿಗಳಿಗೆ ಗಿಡವನ್ನು ನೀಡಿ ಬೀಳ್ಕೊಡಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕುಮಾರ್ ಎಸ್. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವಿದ್ಯಾರ್ಥಿ ನಾಯಕಿ ನಿವಿತಾ ವಂದಿಸಿದರು. ವಿದ್ಯಾರ್ಥಿ ಸುನಿಲ್ ನಿರೂಪಿಸಿದರು.