ಮಡಿಕೇರಿ: ಪ್ರಕೃತಿ ವಿಕೋಪಕ್ಕೆ ಸಿಲುಕಿದ ಕೊಡಗು ಜಿಲ್ಲೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಕೊಡಗು ಜಿಲ್ಲೆಗೆ 536 ಕೋಟಿ ರೂ. ವಿಶೇಷ ಪ್ಯಾಕೇಜ್ ಸಿದ್ದಪಡಿಸಲಾಗಿದ್ದು, ಎರಡು ಮೂರು ದಿನಗಳಲ್ಲಿ 100 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಿಎಸ್ವೈ ಘೋಷಿಸಿದ್ದಾರೆ
ಕೊಡಗು ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಸಿಎಂ, ನೆರೆ ಪರಿಹಾರಕ್ಕೆ ಪಿಡಿ ಖಾತೆಯಲ್ಲಿರುವ 60 ಲಕ್ಷ ರೂ. ವನ್ನು ಕೂಡ ಬಳಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜೀವನಾಡಿ ಕನ್ನಂಬಾಡಿಕಟ್ಟೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ ಗುರುವಾರ ವಿಶೇಷ ಪೂಜೆ ನೆರವೇರಿಸಿ ಬಾಗಿನ ಸಮರ್ಪಿಸಿದರು. ಈ ವೇಳೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ಸಾಥ್ ನೀಡಿದರು.