Sunday, January 19, 2025
ಸುದ್ದಿ

ಎಸ್‌ಎಸ್‌ಎಲ್‌ಸಿ ಮಂಡಳಿಯಲ್ಲಿ ಪಿಯು ಮಂಡಳಿಯ ವಿಲೀನ – ಕಹಳೆ ನ್ಯೂಸ್

ಬೆಂಗಳೂರು : ಬಹುಕಾಲದ ಬೇಡಿಕೆಯಾದ ಎಸ್‌ಎಸ್‌ಎಲ್‌ಸಿ ಮಂಡಳಿಯಲ್ಲಿ ಪಿಯು ಮಂಡಳಿಯನ್ನು ವಿಲೀನಗೊಳಿಸುವ ಪ್ರಕ್ರಿಯೆ ಡಿಸೆಂಬರ್ ವೇಳೆಗೆ ಕೊನೆಗೊಳ್ಳಲಿದ್ದು, 2020 ರ ಪರೀಕ್ಷೆಗಳನ್ನು ಒಂದೇ ಮಂಡಳಿ ನಡಸಲಿದೆ.

ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶುಕ್ರವಾರ ನಡೆದ ಶಿಕ್ಷಣ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕ ಮಾಧ್ಯಮಿಕ ಶಾಲಾ ಪರೀಕ್ಷಾ ಮಂಡಳಿಯೇ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳನ್ನು ನಡೆಸಲಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಭೆಯ ಬಳಿಕ ಮಾತನಾಡಿದ ಸಚಿವ ಸುರೇಶ್, ಸಭೆಯಲ್ಲಿ ಎರಡೂ ಮಂಡಳಿಗಳನ್ನು ವಿಲೀನಗೊಳಿಸುವ ಪ್ರಸ್ತಾವದ ಬಗ್ಗೆ ಚರ್ಚೆ ನಡೆದಿದೆ. ನಾವು ಇದರ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳಲಿದ್ದೇವೆ. ಎರಡೂ ಮಂಡಳಿಗಳನ್ನು ವಿಲೀನಗೊಳಿಸುವ ಸಲುವಾಗಿ ಈಗಾಗಲೇ 50 ಕೋಟಿ ರೂ. ಅನ್ನು ತೆಗೆದಿರಿಸಲಾಗಿದ್ದು, ಎರಡೂ ಇಲಾಖೆಗಳಿಗೆ ಇದರಿಂದ ಹಣ ಉಳಿತಾಯವಾಗಲಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು