ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ವಿಕಿ ಶೆಟ್ಟಿ ಸಹಚರನೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಗರದ ಉದ್ಯಮಿ ವಿಜಯೇಂದ್ರ ಭಟ್ ಅವರ ಶೂಟೌಟ್ ಪ್ರಕರಣ ಸೇರಿದಂತೆ ಏಳು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಬಂಧಿತ ಆರೋಪಿಯನ್ನು ನಿಡ್ಡೆಲ್ ಮರೋಳಿ ನಿವಾಸಿ ದೀಕ್ಷಿತ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಎರಡು ವರ್ಷಗಳ ಹಿಂದೆ ನಗರದ ಬಳ್ಳಾಲ್‍ಬಾಗ್‍ನಲ್ಲಿ ಸುಧೀಂದ್ರ ಸೂಪರ್ ಮಾರ್ಕೆಟ್ ಮತ್ತು ಸಾಯ್ಬಿನ್ ಕಾಂಪ್ಲೆಕ್ಸ್ ಮಾಲೀಕ, ಉದ್ಯಮಿ ವಿಜಯೇಂದ್ರ ಭಟ್ ಅವರ ಕಾರಿನ ಮೇಲೆ ಗುಂಡು ಹಾರಿಸಿದ ಪ್ರಕರಣ ನಡೆದಿತ್ತು. ಇದರಲ್ಲಿ ದೀಕ್ಷಿತ್ ಪೂಜಾರಿ ಭಾಗಿಯಾಗಿದ್ದ ಎಂದು ಹೇಳಲಾಗಿದೆ.
ಭೂಗತ ಲೋಕದ ಪಾತಕಿ ವಿಕ್ಕಿ ಶೆಟ್ಟಿ ಸೂಚನೆಯಂತೆ ಈ ದಾಳಿ ನಡೆಸಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಪ್ರಕರಣದ ತನಿಖೆ ಆರಂಭವಾಗುತ್ತಿದ್ದಂತೆ ಆರೋಪಿ ದೀಕ್ಷಿತ್ ಪೂಜಾರಿ ತಲೆಮರೆಸಿಕೊಂಡಿದ್ದ. ಇದಲ್ಲದೇ ಮಂಗಳೂರು ನಗರ ಮತ್ತು ಉಡುಪಿ ಸೇರಿದಂತೆ ಏಳು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ಹೇಳಲಾಗಿದೆ. ಆರೋಪಿ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.