Recent Posts

Monday, January 20, 2025
ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ ಮಳೆರಾಯ ಕಾಟ ಕೊಡಲಿದ್ದಾನಂತೆ..! ಸೋಮವಾರ ಭಾರಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ, ಗಣೇಶ ಚತುರ್ಥಿ ಸಂದರ್ಭದಲ್ಲಿ ರಾಜ್ಯದ ಕೆಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಗಾಳಕೊಲ್ಲಿಯ ಆಂಧ್ರದ ಕರಾವಳಿ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಹೈದರಾಬಾದ್ ಕರ್ನಾಟಕ ಪ್ರದೇಶದ ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 2ರಿಂದ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದೇ ರೀತಿ ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲೂ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 4ರ ನಂತರ ಹೆಚ್ಚಿನ ಪ್ರಮಾಣದ ಮಳೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಆಂಧ್ರ ಪ್ರದೇಶದ ಕರಾವಳಿ ತೀರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಯಾವ ಸ್ವರೂಪ ಪಡೆಯಲಿದೆ ಮತ್ತು ಯಾವ ದಿಕ್ಕಿನತ್ತ ಸಾಗಲಿದೆ ಎಂಬುದರ ಮೇಲೆ ಮಳೆಯ ಪ್ರಮಾಣವೂ ನಿರ್ಧಾರವಾಗಲಿದೆ ಎಂದು ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.