Sunday, November 24, 2024
ರಾಜಕೀಯ

ಡಿಕೆಶಿ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿಗೂ ಕಂಟಕ; ಡಿನೋಟಿಫಿಕೇಷನ್ ಪ್ರಕರಣದಲ್ಲಿ ಸಮನ್ಸ್ – ಕಹಳೆ ನ್ಯೂಸ್

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕುಮಾರಸ್ವಾಮಿ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಕ್ರಮವಾಗಿ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂಗತೆ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿದೆ.

2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019ರ ಆರಂಭದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆ ಮೂಲಕ ಕುಮಾರಸ್ವಾಮಿ ಅವರಿಗೆ ರಿಲೀಫ್ ಸಿಕ್ಕಿತ್ತು. ಆದರೆ ದೂರುದಾರ ಮಹದೇವಸ್ವಾಮಿ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಲ್ಲಿ ಪ್ರಕರಣ ದಾಖಲಾಗಿದ್ದರೂ ಕ್ರಮ ಕೈಗೊಳ್ಳದೇ, ಈಗ ಇದ್ದಕ್ಕಿದ್ದಂತೆ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಸಿಟ್ಟಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು. ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತ ಕುಮಾರಸ್ವಾಮಿಯವರಿಗೆ ಡಿನೋಟಿಫಿಕೇಷನ್ ಕುಣಿಕೆ ಸುತ್ತಿಕೊಳ್ಳುವ ಸಾಧ್ಯತೆಯಿದ್ದರೆ ಅತ್ತ ಡಿಕೆ ಶಿವಕುಮಾರ್ ಹತ್ತು ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾರೆ. ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂಗೆ ಮತ್ತೆ ಸುಪ್ರೀಂ ಕೋರ್ಟ್‍ನಲ್ಲಿ ಹಿನ್ನಡೆಯಾಗಿದೆ. ಇ.ಡಿ. ಬಂಧನದಿಂದ ತಪ್ಪಿಸಿಕೊಳ್ಳಲು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನನ್ನು ಕೋರ್ಟ್ ವಜಾಗೊಳಿಸಿದೆ.