Saturday, November 23, 2024
ಸುದ್ದಿ

ಕೆಆರ್‍ಎಸ್‍ನಿಂದ 45 ಸಾವಿರ ಕ್ಯೂಸೆಕ್ ನೀರು ಬಿಡುಗಡೆ; ಪ್ರವಾಹ ಭೀತಿಯಲ್ಲಿ ಕಾವೇರಿ ನದಿ ಜನತೆ – ಕಹಳೆ ನ್ಯೂಸ್

ಮಂಡ್ಯ : ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿಗಳು ಪ್ರವಾಹ ಮಟ್ಟ ಮೀರಿ ಹರಿಯುತ್ತಿವೆ. ಹೀಗಾಗಿ ಜಲಾಶಯಗಳ ನೀರಿನ ಮಟ್ಟವೂ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಕೆಆರ್‍ಎಸ್ ಒಳ ಹರಿವಿನಲ್ಲಿ ಹೆಚ್ಚಳವಾಗಿರುವ ಹಿನ್ನೆಲೆ, ನದಿ ಪಾತ್ರದ ಜನರಲ್ಲಿ ಪ್ರವಾಹ ಭೀತಿ ಹೆಚ್ಚಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಡ್ಯಾಂನ ಒಳಹರಿವಿನಲ್ಲೂ ಗಣನೀಯ ಹೆಚ್ಚಳವಾಗಿದೆ. ಒಳಹರಿವು 28,359 ಕ್ಯೂಸೆಕ್ ಹೆಚ್ಚಳವಾಗಿದೆ. ಜಲಾಶಯದ ಹೊರಹರಿವು 43,597 ಕ್ಯೂಸೆಕ್ ಹೆಚ್ಚಾಗಿದೆ.
ಕೆ.ಆರ್.ಎಸ್.ಜಲಾಶಯ ಭರ್ತಿಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನದಿಗೆ ನೀರು ಬಿಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡ್ಯಾಂನಿಂದ 45 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಸಂಜೆ ವೇಳೆಗೆ ನೀರಿನ ಒಳ ಮತ್ತು ಹೊರ ಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಕಾವೇರಿ ನದಿಪಾತ್ರದಲ್ಲಿ ಮತ್ತೆ ಪ್ರವಾಹ ಎದುರಾಗಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಾಲೂಕು ಆಡಳಿತ ಮನವಿ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆ.ಆರ್.ಎಸ್. ಹೊರ ಹರಿವು ಹೆಚ್ಚಾದ ಹಿನ್ನೆಲೆ ಪ್ರಸಿದ್ಧ ತಾಣವಾದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದಲ್ಲಿ ಬೋಟಿಂಗ್ ಸ್ಥಗಿತ ಮಾಡಲಾಗಿದೆ.

ಇನ್ನು, ಮಲೆನಾಡು ಭಾಗದಲ್ಲೂ ಅಧಿಕ ಮಳೆಯಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಅಧಿಕ ಮಳೆಯಾಗುತ್ತಿರುವ ಹಿನ್ನೆಲೆ, ಮತ್ತೆ ಕೊಯ್ನಾ ಜಲಾಶಯದಿಂದ ನೀರು ಬಿಡುವ ಸಾಧ್ಯತೆ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದಲ್ಲೂ ಪ್ರವಾಹ ಭೀತಿ ಹೆಚ್ಚಾಗಿದೆ.