Monday, November 25, 2024
ರಾಜಕೀಯ

ಕುಮಾರಸ್ವಾಮಿಗೆ ಭೂ ಕಂಟಕ – ಕಹಳೆ ನ್ಯೂಸ್

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಕುಮಾರಸ್ವಾಮಿ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2007 ರಲ್ಲಿ ಕುಮಾರಸ್ವಾಮಿ ಮೊದಲ ಬಾರಿ ಸಿಎಂ ಆಗಿದ್ದ ವೇಳೆ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಸಂಬಂಧ ವಡೇರಹಳ್ಳಿಯ 2 ಎಕೆರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ 2012 ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019 ರ ಆರಂಭದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ದೂರುದಾರ ಮಹದೇವಸ್ವಾಮಿ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು. ಇದೀಗ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು