Wednesday, January 22, 2025
ಸುದ್ದಿ

ಸಸಿಕಾಂತ್ ಸೆಂಥಿಲ್ ರಾಜೀನಾಮೆ ಹಿನ್ನಲೆ, ಒಂದೇ ದಿನದಲ್ಲಿ ದಕ್ಷಿಣ ಕನ್ನಡಕ್ಕೆ ಹೊಸ ಡಿಸಿ ನೇಮಕ – ಕಹಳೆ ನ್ಯೂಸ್

ಮಂಗಳೂರು[ಸೆ. 07] ದಕ್ಷಿಣ ಕನ್ನಡಕ್ಕೆ ನೂತನ ಜಿಲ್ಲಾಧಿಕಾರಿಯ ನೇಮಕವಾಗಿದೆ. ಐಎಎಸ್ ಸೇವೆಗೆ ರಾಜೀನಾಮೆ ಸಲ್ಲಿಸಿದ್ದ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಜಾಗಕ್ಕೆ ಸಿಂಧೂ ಬಿ.ರೂಪೇಶ್ ಅವರನ್ನು ನೇಮಕ ಮಾಡಲಾಗಿದೆ.

ಸಿಂಧೂ ಬಿ.ರೂಪೇಶ್
ಸಿಂಧೂ ಬಿ.ರೂಪೇಶ್

ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸಿಂಧೂ ಬಿ.ರೂಪೇಶ್ ಅವರು ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

2009ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ 2017ರ ಅಕ್ಟೋಬರ್ 10ರಿಂದ ದ‌.ಕ ಜಿಲ್ಲಾಧಿಕಾರಿಯಾಗಿ ಸೇವೆ ಆರಂಭಿಸಿದ್ದರು. ದಕ್ಷ ಅಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ತಮ್ಮ ರಾಜೀನಾಮೆ ವೈಯಕ್ತಿಕ ನಿರ್ಧಾರ ಎಂದು ಹೇಳಿ ಕೆಲ ಸವಾಲುಗಳನ್ನು ಉಲ್ಲೇಖಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು