Recent Posts

Sunday, January 19, 2025
ರಾಜಕೀಯ

ಬೆಂಗಳೂರಿನ ಕಸ ನಿರ್ವಹಣೆ ಬಗ್ಗೆ ಗಂಭೀರ ಚಿಂತನೆ – ಕಹಳೆ ನ್ಯೂಸ್

ಬೆಂಗಳೂರು ನಗರದ ಸ್ವಚ್ಚತೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಬೆಂಗಳೂರಿನ ಎಲ್ಲಾ ಶಾಸಕರು ಮತ್ತು ಸಂಸದರ ಸಭೆ ನಿನ್ನೆ ಕರೆದಿದ್ದಾರೆ. ನಿನ್ನೆಯ ಸಭೆಯಲ್ಲಿ ಸಾಕಷ್ಟು ವಿಷಯಗಳ ಬಗ್ಗೆ ಚರ್ಚೆ ನಡೆಯಿತು.
ಬೆಂಗಳೂರಿನಲ್ಲಿ ಸರಿಯಾದ ಡಂಪಿಂಗ್ ಆಗುತ್ತಿಲ್ಲ. ಇದರಿಂದ ನಗರದಲ್ಲಿ ಸಾಕಷ್ಟು ತೊಂದರೆಯಾಗಿದೆ. ಈ ಹಿನ್ನಲೆಯಲ್ಲಿ ನಗರವನ್ನು ಸ್ವಚ್ಚ ಇಟ್ಟುಕೊಳ್ಳುವಂತೆ ನಗರದ ಆಯುಕ್ತರಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ. ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಈಗಾಗಲೇ ಕಸದ ತ್ಯಾಜ್ಯ ಬಳಸಿ ರಸ್ತೆ ನಿರ್ಮಿಸುವ ಕಾರ್ಯಕ್ಕೆ ಚಾಲನೆ ನೀಡಿದ್ದು, ಬೆಂಗಳೂರಿನಲ್ಲಿ ಈ ಯೋಜನೆಗಳನ್ನು ಬಳಸಿಕೊಂಡಲ್ಲಿ ಖಂಡಿತ ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ದೂರಕಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು