Recent Posts

Sunday, January 19, 2025
ರಾಜಕೀಯ

ಹಿಂದೂ ಪರ ಸಂಘಟನೆಗಳ ಸದಸ್ಯರ ಮೇಲಿನ ಪ್ರಕರಣಗಳನ್ನು ಹಿಂಪಡೆಯಿರಿ.. ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸಿಎಂಗೆ ಕಟೀಲ್ ತಾಕೀತು – ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿ ಕಾರ್ಯಕರ್ತರು ಸೇರಿದಂತೆ ಹಿಂದೂ ಪರ ಸಂಘಟನೆಗಳ ಸದಸ್ಯರ ವಿರುದ್ಧ ಹೂಡಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧರಿಸಲಾಗಿದೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪವಾದ ಈ ವಿಚಾರದ ಬಗ್ಗೆ ವ್ಯಾಪಕ ಚರ್ಚೆ ನಡೆಯಿತು.

ಪಕ್ಷದ ಕಾರ್ಯಕರ್ತರು, ಹಿಂದೂ ಪರ ಸಂಘಟನೆಗಳ ಸದಸ್ಯರ ಮೇಲೆ ವಿನಾಕಾರಣ ಪ್ರಕರಣ ಹೂಡಿರುವುದು, ಕ್ಷುಲ್ಲಕ ಕಾರಣಕ್ಕೆ ಸಣ್ಣ ಪುಟ್ಟ ಮೊಕದ್ದಮೆ ದಾಖಲಿಸಿದ್ದು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಅಂತಹ ಪ್ರಕರಣಗಳನ್ನು ಹಿಂಪಡೆಯಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ ಅವರು, ಈ ಬಗ್ಗೆ ಗಮನ ಹರಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಮೂಲಗಳು ಹೇಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪೊಲೀಸ್ ಇಲಾಖೆಗೆ ಮುಚ್ಚಳಿಕೆ ನೀಡುವ ವ್ಯವಸ್ಥೆ ಸೂಕ್ತವಲ್ಲ. ಹಿಂದೂ ಧರ್ಮದ ಆಚರಣೆಗಳಿಗೆ ಆದ್ಯತೆ ನೀಡಿ ಪ್ರತಿಪಾದಿಸುತ್ತಾ, ಪಾಲಿಸುತ್ತಾ ಬಂದಿರುವ ಬಿಜೆಪಿಯೇ ಅಧಿಕಾರದಲ್ಲಿರುವಾಗ ಮುಚ್ಚಳಿಕೆ ನೀಡಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ವ್ಯವಸ್ಥೆ ಮುಂದುವರಿಸಿದ್ದು ಸರಿಯಲ್ಲ ಎಂದು ಸಭೆಯಲ್ಲಿದ್ದ ಹಲವರು ಬೇಸರ ವ್ಯಕ್ತಪಡಿಸಿದರು. ಈ ಎಲ್ಲಾ ವಿಷಯಗಳ ಕುರಿತು ಪರಿಶೀಲಿಸಲಾಗುವುದು ಎಂದು ಬಿಎಸ್‍ವೈ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು