Monday, November 25, 2024
ಸುದ್ದಿ

ಯಡಿಯೂರಪ್ಪ ಅವರೇ ಸಿಎಂ; ಅವರು ಬಲಹೀನರಾಗಲು ಹೇಗೆ ಸಾಧ್ಯ..? ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ – ಕಹಳೆ ನ್ಯೂಸ್

ಕಲಬುರಗಿ : ಬಿ.ಎಸ್. ಯಡಿಯೂರಪ್ಪ ಅವರೇ ಈಗ ಮುಖ್ಯಮಂತ್ರಿ. ಹಾಗಿದ್ದ ಮೇಲೆ ಅವರು ಹೇಗೆ ಬಲಹೀನರಾಗುತ್ತಾರೆ. ಅವರನ್ನು ಬಲಹೀನ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂವರನ್ನು ಡಿಸಿಎಂ ಮಾಡಿ ಪೂರ್ಣ ಪ್ರಮಾಣದಲ್ಲಿ ಸಂಪುಟ ವಿಸ್ತರಣೆ ಮಾಡಿಲ್ಲದಿರುವ ಕುರಿತಾದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕಟೀಲ್, ಯಡಿಯೂರಪ್ಪ ನಮ್ಮೆಲ್ಲರ ನಾಯಕರಾಗಿದ್ದಾರೆ. ಅವರ ಕೈ ಕೆಳಗೆ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ಹೀಗಿರಬೇಕಾದರೆ ಅವರನ್ನು ಬಲಹೀನ ಮಾಡಿದ್ದಾರೆ ಎಂಬುದು ಶುದ್ಧ ಸುಳ್ಳು ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ :
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಕಟೀಲ್ ಕಲುಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿರುವ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದತ್ತನ ಪಾದುಕೆಗಳಿಗೆ ಅಭಿಷೇಕ ಮಾಡಿ ಪ್ರಾರ್ಥನೆ ಸಲ್ಲಿಸಿದರು.ಈ ಹಿಂದೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಡಿ.ಕೆ. ಶಿವಕುಮಾರ್, ಸಚಿವ ಕೆ.ಎಸ್. ಈಶ್ವರಪ್ಪ ಸೇರಿದಂತೆ ಹಲವು ರಾಜಕೀಯ ಮುಖಂಡರು ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ:
ಕಲಬುರಗಿ ಪ್ರವಾಸದಲ್ಲಿರುವ ನಳೀನ್ ಕುಮಾರ್ ಕಟೀಲ್ ಐತಿಹಾಸಿಕ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಟೀಲ್ ಮಠದ ಪೀಠಾಧಿಪತಿ ಶರಣಬಸಪ್ಪ ಅಪ್ಪಾ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಕಟೀಲ್‍ಗೆ ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್, ಬೀದರ್ ಸಂಸದ ಭಗವಂತ್ ಖೂಬಾ, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಎಮ್‍ಎಲ್‍ಸಿ ಬಿ.ಜಿ ಪಾಟೀಲ್ ಸಾಥ್ ನೀಡಿದರು.