ಬೆಂಗಳೂರು: ನೆರೆ ಸಂತ್ರಸ್ತರು ವಾಸವಾಗಿರುವ ರಾಯಚೂರಿನ ಗಂಜಿ ಕೇಂದ್ರದಲ್ಲಿ, ರೈತರ ಬಡ್ಡಿ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು, ರಾಯಚೂರು ಭಾಗದ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಇಂದು ಖುದ್ದು ಕರೆ ಮಾಡಿ ಎಚ್ಚರಿಕೆ ನೀಡಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ದೂರವಾಣಿ ಮೂಲಕ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪನವರು, ನೆರೆಪೀಡಿತ ಪ್ರದೇಶದಲ್ಲಿ ಇಂತಹ ಪ್ರಕರಣಗಳು ಕಂಡು ಬಂದರೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಯಚೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.
ನೆರೆಪೀಡಿತ ಪ್ರದೇಶದ ಗಂಜಿ ಕೇಂದ್ರದಲ್ಲಿ ವಾಸಿಸುತ್ತಿರುವ ಸಂತ್ರಸ್ತರಿಂದ ಸಾಲ ಮತ್ತು ಬಡ್ಡಿ ವಸೂಲಿ ಮಾಡಲು ಮೈಕ್ರೋ ಫೈನಾನ್ಸ್ ಕಂಪನಿಗಳು ಮುಂದಾಗಿರುವ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಈ ಸೂಚನೆ ನೀಡಿದ್ದಾರೆ.