Sunday, November 24, 2024
ಸುದ್ದಿ

ಐಎಎಂಎ ಪ್ರಕರಣದ ದೋಷಾರೋಪ ಪಟ್ಟಿ ಕೋರ್ಟ್‍ಗೆ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ಐಎಎಂಎ ವಂಚನೆ ಪ್ರಕರಣದ ತನಿಖೆಯನ್ನು ಕೈಗೊಂಡಿರುವ ಸಿಬಿಐ ಅಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ, ಪ್ರಾಥಮಿಕ ಹಂತದ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಮರ್ಷಿಯಲ್ ಸ್ಟ್ರೀಟ್ ಠಾಣೆಯಲ್ಲಿ, ಐಎಂಎ ವಂಚನೆ ಬಗ್ಗೆ ಎಫ್‍ಐಆರ್ ದಾಖಲಾಗಿ ಸೆಪ್ಟಂಬರ್ 9ಕ್ಕೆ 90 ದಿನ ಪೂರ್ಣಗೊಳ್ಳಲಿದೆ. 90 ದಿನದ ಒಳಗಾಗಿ ಆರೋಪಪಟ್ಟಿ ಸಲ್ಲಿಸದಿದ್ದರೆ, ಆರೋಪಿಗಳಿಗೆ ಜಾಮೀನು ಪಡೆಯಲು ಕಾನೂನಿನಲ್ಲಿ ಅವಕಾಶವಿದೆ. ಈ ಹಿನ್ನೆಲೆಯಲ್ಲಿ ಆರೋಪ ಪಟ್ಟಿ ಸಲ್ಲಿಕೆಗೆ ಅಲ್ಪಾವಧಿ ಇದ್ದ ಕಾರಣ ಸಿಬಿಐ ಅಧಿಕಾರಿಗಳು, ಈಗಾಗಲೇ ಎಸ್‍ಐಟಿ ಅಧಿಕಾರಿಗಳು ನಡೆಸಿರುವ ತನಿಖಾ ವರದಿಯನ್ನು ಕ್ರೋಢೀಕರಿಸಿ ಮೊದಲ ಹಂತದ ದೋಷಾರೋಪಪಟ್ಟಿ ಸಲ್ಲಿಸಿದ್ದು, ತನಿಖೆ ಮುಂದುವರಿದಿದೆ. ಈತನ ವಿರುದ್ದ ಈಗಾಗಲೇ 1 ಸಾವಿರ ಪುಟಗಳ ಚಾರ್ಜ್‍ಶೀಟ್ ಅನ್ನು ಸಲ್ಲಿಸಲಾಗಿದೆ. 52 ಸಾವಿರ ಹೂಡಿಕೆದಾರರ ದೂರಿನ ಪ್ರತಿಗಳು ಸಹ ಲಗತ್ತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು