Sunday, November 24, 2024
ರಾಜಕೀಯ

ಹಳೆ ಪ್ರಕರಣವೊಂದನ್ನು ತನಿಖೆಗೆ ಆದೇಶಿಸಿದ ಮುಖ್ಯಮಂತ್ರಿ ಬಿ.ಎಸ್.ವೈ – ಕಹಳೆ ನ್ಯೂಸ್

ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾಗಿದ್ದ ಕೃಷಿ ಭಾಗ್ಯ, ಯೋಜನೆಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೃಷಿ ಹೊಂಡ ನಿರ್ಮಾಣ ಸೇರಿದಂತೆ ಸಿದ್ದರಾಮಯ್ಯ ಸರ್ಕಾರದ ಅವಧಿಯ ಐದು ಯೋಜನೆಗಳಲ್ಲಿ, ಅಕ್ರಮ ನಡೆದಿರುವ ಶಂಕೆ ಮೇಲೆ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಮೂಲಗಳ ಪ್ರಕಾರ 2014-15ರಲ್ಲಿ ಆರಂಭಗೊಂಡ 921 ಕೋಟಿ ರೂ. ಮೊತ್ತದ ಕೃಷಿ ಭಾಗ್ಯ ಯೋಜನೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆಗೆ ಸಂಬಂಧಿಸಿದ ನಾಲ್ಕು ಪ್ರಕರಣಗಳ ತನಿಖೆಗೆ ಈಗ ಆದೇಶ ಹೊರಡಿಸಲಾಗಿದೆ. ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆಯಲ್ಲಿ ಸಾವಿರಾರು ಕೋಟಿ ರೂ.ಗಳ ಹಗರಣ ನಡೆದ ಆರೋಪವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರಿಗೆ ಸೂಚಿಸಿದ್ದಾರೆ. ಇನ್ನು ಬಿಎಸ್‍ವೈ ಸರ್ಕಾರದ ನಡೆಯನ್ನು ಟೀಕಿಸಿರುವ ಕಾಂಗ್ರೆಸ್, ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದಿದೆ.