Recent Posts

Tuesday, January 21, 2025
ಸುದ್ದಿ

ಬಂಟ್ವಾಳ ವ್ಯವಸಾಯ ಸೇವಾ ಸಂಘದ ರತ್ನಾಕರ್ ಅವರಿಗೆ ಬೀಳ್ಕೊಡುಗೆ – ಕಹಳೆ ನ್ಯೂಸ್

ಬಂಟ್ವಾಳ: ಅಧಿಕಾರಿಗಳು, ಸಿಬ್ಬಂದಿಗಳು ನಿರಂತರವಾಗಿ ಸಂಸ್ಥೆಯ ಜೊತೆಯಲ್ಲಿ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಿದ ಫಲವಾಗಿ ಇಂದು ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್‍ಗಳು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸುತ್ತಿದೆ ಎಂದು ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಆಧ್ಯಕ್ಷ ಜಿ.ಆನಂದ ಅವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಬಂಟ್ವಾಳ ವ್ಯವಸಾಯ ಸೇವಾ ಸಂಘದಲ್ಲಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರತ್ನಾಕರ ಅವರ ಬೀಳ್ಕೊಡುಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಸ್ಥೆಯ ಅಭಿವೃದ್ಧಿ ಸಿಬ್ಬಂದಿಗಳಿಂದ ಮಾತ್ರ ಸಾಧ್ಯ ಎಂದು ಅವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ನಿರ್ದೇಶಕರುಗಳಾದ ಕರುಣೇಂದ್ರ ಪೂಜಾರಿ, ಶೇಖರ್, ವಿದ್ಯಾವತಿ ಪ್ರಮೋದ್ ಕುಮಾರ್, ಬಸ್ತಿ ಸದಾಶಿವ ಶೆಣ್ಯೆ, ಪ್ರಕಾಶ್ ಕೆ, ಭವಾನಿಶಂಕರ್ ರಾವ್ , ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರತಿನಿಧಿ ಕೇಶವ ಕಿಣಿ, ಬಂಟ್ವಾಳ ಶಾಖಾ ಮುಖ್ಯ ಕಾರ್ಯನಿರ್ವಣಾಧಿಕಾರಿ ಜಯಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

ನಾವೂರು ಶಾಖಾ ವ್ಯವಸ್ಥಾಪಕರು ಪುಷ್ಪಾಲತಾ ಸ್ವಾಗತಿಸಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ ವಂದಿಸಿದರು. ಸಿಬ್ಬಂದಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.