Recent Posts

Sunday, January 19, 2025
ರಾಜಕೀಯ

ಇಂದು ಲೋಕನಾಯಕ ಭವನದಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು: ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಇಂದು ಇಡಿ ಕಚೇರಿಗೆ ತೆರಳಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಲಿದ್ದಾರೆ.

ಬುಧವಾರ ಸಮನ್ಸ್ ಪಡೆದಿರುವ ಐಶ್ವರ್ಯ, ತಾಯಿ ಸುಮಾ ಹಾಗೂ ಕುಣಿಗಲ್ ಶಾಸಕ ರಂಗನಾಥ್ ಜೊತೆ ಈಗಾಗಲೇ ದೆಹಲಿಯಲ್ಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಲೋಕನಾಯಕ ಭವನದಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ಐಶ್ವರ್ಯ ವಿಚಾರಣೆ ಎದುರಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಗರಿಬೊಮನಹಳ್ಳಿಯ ಸೋಲಾರ್ ಪ್ಲಾಂಟ್ ಸೋಲ್ಸ್ ಆಂಡ್ ಸೇಲ್ಸ್, ಸೋಲ್ ಅರೆನಾ ಮಾಲ್‍ನಲ್ಲಿ ಪಾಲುದಾರಿಕೆ, ಉತ್ತರಹಳ್ಳಿಯಲ್ಲಿ ಅಜ್ಜಿಯಿಂದ 3 ಎಕರೆ ಗಿಫ್ಟ್ ಡೀಡ್, ಆರ್.ಆರ್ ನಗರದ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ, ನ್ಯಾಷನಲ್ ಹಿಲ್ ವ್ಯೂ ಸ್ಕೂಲ್‍ನಲ್ಲಿ ಪಾತ್ರ, ಹಾಗೂ ಶ್ರೀರಾಮ್ ಫೈನಾನ್ಸಿನಲ್ಲಿ ಇರುವ ಪಾಲುದಾರಿಕೆ ಬಗ್ಗೆ ಐಶ್ವರ್ಯಗೆ ಇಡಿ ಪ್ರಶ್ನೆಗಳನ್ನು ಕೇಳುವ ಸಾಧ್ಯತೆ ಇದೆ.

ಸಮನ್ಸ್ ಜಾರಿ ಮಾಡಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದ್ದಕ್ಕೆ ಡಿಕೆ ಶಿವಕುಮಾರ್ ಬಂಧನಕ್ಕೆ ಒಳಗಾಗಿದ್ದರು. ಈಗ ಪುತ್ರಿಗೂ ಸಮನ್ಸ್ ಜಾರಿಯಾಗಿದ್ದು ಸರಿಯಾದ ಉತ್ತರ ನೀಡದೇ ಇದ್ದರೆ ಐಶ್ವರ್ಯ ಸಹ ಬಂಧನವಾಗುವ ಸಾಧ್ಯತೆಯಿದೆ.