Monday, January 20, 2025
ಸುದ್ದಿ

ಲಡಾಕ್‍ನ ಪ್ಯಾಂಗಾಂಗ್ ಸರೋವರದ ಬಳಿ ಮುಖಾಮುಖಿಯಾದ ಭಾರತ -ಚೀನಾ ಸೈನಿಕರು – ಕಹಳೆ ನ್ಯೂಸ್

ಲೇಹ್ : ಜಮ್ಮು ಮತ್ತು ಕಾಶ್ಮೀರದ ಲಡಾಕ್‍ನಲ್ಲಿರುವ ಪ್ಯಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಾ ಸೇನೆ ಮುಖಾಮುಖಿಯಾಗಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಭಯ ಸೇನಾಧಿಕಾರಿಗಳು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಪ್ಯಾಂಗಾಂಗ್ ಸರೋವರದ ಬಳಿ ವಾಸ್ತವಿಕ ಗಡಿ ರೇಖೆಯ ಸಮೀಪ ಬುಧವಾರ ಬೆಳಗ್ಗೆ ಭಾರತೀಯ ಸೈನಿಕರು ಗಸ್ತು ತಿರುಗುತ್ತಿದ್ದ ವೇಳೆ ಚೀನಾ ಸೈನಿಕರೊಂದಿಗೆ ಮುಖಾಮುಖಿಯಾಗಿದ್ದಾರೆ. ಈ ವೇಳೆ ಉಭಯ ಸೈನಿಕರು ಹೆಚ್ಚುವರಿ ಸೈನಿಕರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದರಿಂದ ಸಂಜೆಯವರೆಗೂ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ ಸಂಜೆ ವೇಳೆ ಭಾರತ ಮತ್ತು ಚೀನಾ ಸೇನೆಯ ಅಧಿಕಾರಿಗಳು ಸಭೆ ನಡೆಸಿ ಸಮಸ್ಯೆಯನ್ನು ಪರಿಹರಿಸಿದ್ದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ಯಾಂಗಾಂಗ್ ಸರೋವರದ ಬಳಿ ಈ ಹಿಂದೆಯೂ ಹಲವು ಬಾರಿ ಭಾರತ ಮತ್ತು ಚೀನಾ ಸೈನಿಕರು ಮುಖಾಮುಖಿಯಾಗಿದ್ದರು. 2017ರ ಆಗಸ್ಟ್ 15ರಂದು ಚೀನಾ ಸೇನೆ ಭಾರತದ ಗಡಿಯೊಳಗೆ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿತ್ತು. ಈ ವೇಳೆ ಭಾರತೀಯ ಸೈನಿಕರು ಚೀನಾ ಸೈನಿಕರನ್ನು ತಡೆದಿದ್ದರು. ಈ ವೇಳೆ ಸೈನಿಕರು ಪರಸ್ಪರರ ಮೇಲೆ ಕಲ್ಲು ತೂರಾಟ ನಡೆಸುವ ಮತ್ತು ಪರಸ್ಪರರನ್ನು ತಳ್ಳಾಡಿಕೊಂಡಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು