Saturday, November 23, 2024
ಕ್ರೀಡೆಸುದ್ದಿ

ಫಿರೋಜ್ ಶಾ ಕೋಟ್ಲಾ ಮೈದಾನ ಇನ್ಮುಂದೆ ಆಗಲಿದೆ ಅರುಣ್ ಜೇಟ್ಲಿ ಮೈದಾನ – ಕಹಳೆ ನ್ಯೂಸ್

ಹೊಸದಿಲ್ಲಿ: ಭಾರತದ ಪ್ರಮುಖ ಕ್ರಿಕೆಟ್ ಮೈದಾನಗಳಲ್ಲಿ ಒಂದಾಗಿರುವ ದೆಹಲಿಯ ಫಿರೋಜ್ ಶಾ ಕೋಟ್ಲಾ ಕ್ರೀಡಾಂಗಣಕ್ಕೆ ಇಂದು ಮರು ನಾಮಕರಣವಾಗಲಿದೆ. ಇತ್ತೀಚೆಗೆ ಅಗಲಿದ ಮಾಜಿ ಸಚಿವ ಅರುಣ್ ಜೇಟ್ಲಿ ಅವರ ಹೆಸರನ್ನು ದೆಹಲಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಇಡಲು ದೆಹಲಿ ಕ್ರಿಕೆಟ್ ಮಂಡಳಿ ನಿರ್ಧರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕ್ರೀಡಾಂಗಣಕ್ಕೆ ಮರುನಾಮಕರಣ ಮಾಡಲಿದ್ದಾರೆ. ಕ್ರೀಡಾ ಸಚಿವ ಕಿರಣ್ ರಿಜುಜು, ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರುಣ್ ಜೇಟ್ಲಿ ಅವರ ಕುಟುಂಬದವರು ಕೂಡಾ ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಜಿ ಸಚಿವ ಅರುಣ್ ಜೇಟ್ಲಿ ಅವರು ಆಗಸ್ಟ್ 24ರಂದು ಅನಾರೋಗ್ಯದಿಂದ ಅಸುನೀಗಿದ್ದರು. ಆಗಸ್ಟ್ 27ರಂದು ದೆಹಲಿ ಕ್ರಿಕೆಟ್ ಮಂಡಳಿ ಕ್ರೀಡಾಂಗಣಕ್ಕೆ ಅರುಣ್ ಜೇಟ್ಲಿ ಹೆಸರಿಡಲು ತೀರ್ಮಾನಿಸಿತ್ತು.

ಅರುಣ್ ಜೇಟ್ಲಿ ಅವರು 1999ರಿಂದ 2019ರವರೆಗೆ ದೆಹಲಿ ಕ್ರಿಕೆಟ್ ಮಂಡಳಿಯ ಅಧ್ಯಕ್ಷರಾಗಿದ್ದರು. ಫಿರೋಜ್ ಶಾ ಕೋಟ್ಲಾ ಮೈದಾನದ ಉನ್ನತ್ತೀಕರಣಕ್ಕಾಗಿ ಜೇಟ್ಲಿ ಅವರ ಕೊಡುಗೆ ಅಪಾರ.. ಇದನ್ನು ಪರಿಗಣಿಸಿ ಅವರಿಗೆ ಈ ಗೌರವವನ್ನು ನೀಡಲಾಗುತ್ತಿದೆ.