Recent Posts

Sunday, January 19, 2025
ಸುದ್ದಿ

ಉಪ್ಪಿನಂಗಡಿ: ಜೆಸಿ ಸಪ್ತಾಹದ 5ನೇ ದಿನದ ಅಂಗವಾಗಿ ಜಲ ಸಂರಕ್ಷಣೆ ಮತ್ತು ನೀರಿನ ಕೊಯ್ಲು ಬಗ್ಗೆ ಮಾಹಿತಿ ಕಾರ್ಯಾಗಾರ- ಕಹಳೆ ನ್ಯೂಸ್

ಜಿಸಿಐ ಘಟಕದ ಜೇಸಿ ಸಪ್ತಾಹದ 5ನೇ ದಿನದ ಕಾರ್ಯಕ್ರಮದಂಗವಾಗಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಉಪ್ಪಿನಂಗಡಿ ಇಲ್ಲಿನ ಸಭಾಂಗಣದಲ್ಲಿ “ಜಲ ಸಂರಕ್ಷಣೆ ಮತ್ತು ಮಹತ್ವ ,ಮಳೆ ನೀರಿನ ಕೊಯ್ಲು ” ಇದರ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮವನ್ನು ಮುಳಿಯ ಜ್ಯುವೆಲ್ಲರ್ಸ್ ನ ಚೇರ್ಮನ್ ಅಂಡ್ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಶ್ರೀ ಕೇಶವಪ್ರಸಾದ್ ಮುಳಿಯ ಇವರು ಉದ್ಘಾಟಿಸಿ ಶುಭ ಹಾರೈಸಿದರು .ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಿಮರ್ಶಕರು, ಅಡಿಕೆ ಪತ್ರಿಕೆಯ ಸಂಪಾದಕರೂ ಆಗಿರುವ ಶ್ರೀಯುತ ಶ್ರೀಪಡ್ರೆ ಅವರು ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ಸುಮಾರು ಎರಡು ಗಂಟೆಗಳ ಕಾಲ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಉಪ್ಪಿನಂಗಡಿ ಖ್ಯಾತ ಆಯುರ್ವೇದಿಕ್ ವೈದ್ಯರಾದ ಶ್ರೀ ನಿರಂಜನ್ ರೈ ,ಸರಕಾರಿ ಮಾದರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ದೇವಕಿ , ನೆಲ-ಜಲ ಸಂರಕ್ಷಣಾ ವೇದಿಕೆ, ಉಪ್ಪಿನಂಗಡಿ ಇದರ ಪ್ರಧಾನ ಕಾರ್ಯದರ್ಶಿಯಾದ ಶ್ರೀಮತಿ ವಂದನಾ,ಸ್ವಾತಂತ್ರ್ಯೋತ್ಸವ ಸಮಿತಿ ಉಪ್ಪಿನಂಗಡಿ ಇದರ ಅಧ್ಯಕ್ಷರಾದ ಶ್ರೀ ವಿಜಯಕುಮಾರ್ ಕಲ್ಲಳಿಕೆ, ಶಾಲಾ ಶಿಕ್ಷಕ- ಶಿಕ್ಷಕಿ ವೃಂದದವರು, ವಿದ್ಯಾರ್ಥಿಗಳು ಮತ್ತು ಸರಕಾರಿ ಪ್ರೌಢಶಾಲೆ ಉಪ್ಪಿನಂಗಡಿ ಇಲ್ಲಿನ ವಿದ್ಯಾರ್ಥಿಗಳು ,ಸರಕಾರಿ ಪಿ.ಯು.ಕಾಲೇಜು ಉಪ್ಪಿನಂಗಡಿ ಇಲ್ಲಿನ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಗಿಡವನ್ನು ವಿತರಿಸಲಾಯಿತು .ಸುಮಾರು 450 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡರು .ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಶ್ರೀಯುತ ಶ್ರೀಪಡ್ರೆ ಅವರನ್ನು ಗೌರವಿಸಲಾಯಿತು .

ಜಾಹೀರಾತು

ಜಾಹೀರಾತು
ಜಾಹೀರಾತು