ಪ್ರಧಾನಿ ನರೇಂದ್ರ ಮೋದಿ ಅವರ ಸ್ವಸ್ಥ ಭಾರತ ನಿರ್ಮಾಣ ಕನಸಿನ ಭಾಗವಾಗಿರುವ ‘ಪೋಷಣ್ ಅಭಿಯಾನ್ ಯೋಜನೆ’ ಸಂಬಂಧ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಜೂತೆ ಸಭೆ ನಡೆಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮಹತ್ವಾಕಾಂಕ್ಷಿಯ ಪೋಷಣ್ ಅಭಿಯಾನ್ ಯಶಸ್ಸಿಗೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹೆಚ್ಚಿನ ಶ್ರಮವಹಿಸಬೇಕೆಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಲಹೆ ನೀಡಿದರು. ಮಕ್ಕಳು, ಮಹಿಳೆಯರು ಹಾಗೂ ವಿಶೇಷವಾಗಿ ಗರ್ಭಿಣಿಯರಲ್ಲಿ ಅಪೌಷ್ಠಿಕತೆ ತಡೆಗಟ್ಟುವ ಯೋಜನೆ ಇದಾಗಿದ್ದು, ಯೋಜನೆಯ ಸಮರ್ಪಕ ಜಾರಿಗೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರ ಅಗತ್ಯ.
ಯಡಿಯೂರಪ್ಪ ಮಾತನಾಡಿ, ಪ್ರಧಾನ ಮಂತ್ರಿಗಳ ಸ್ವಸ್ಥ ಭಾರತ ನಿರ್ಮಾಣದ ಕನಸು ನನಸಾಗುವ ಕಾರ್ಯಕ್ರಮ ಇದಾಗಿದ್ದು, ಯೋಜನೆಯ ಜಾರಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಪೋಷಣ್ ಅಭಿಯಾನ್ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ಜಿಲ್ಲೆಗಳಲ್ಲಿಯೂ ಮುಂದಿನ ದಿನಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು. ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಉಪಸ್ಥಿತರಿದ್ದರು.