Thursday, January 23, 2025
ಸುದ್ದಿ

ಮೊಬೈಲ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಮೊಬೈಲ್ ಕೊಟ್ಟಿಲ್ಲ ಎಂಬ ಕಾರಣಕ್ಕೆ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ಹನುಮಂತನಗರದಲ್ಲಿ ನಡೆದಿದೆ.

ಪ್ರಿಯಾಂಕಾ (16) ನೇಣಿಗೆ ಶರಣಾಗಿರುವ ಬಾಲಕಿ. ಪ್ರಿಯಾಂಕಾ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಶನಿವಾರ ಶಾಲೆಗೆ ಹೋಗಿ ಮನೆಗೆ ಬೇಗ ಬಂದಿದ್ದಳು. ನಂತರ ಸ್ನೇಹಿತರ ಮನೆಗೆ ಹೋಗೋಣ ಎಂದು ನಿರ್ಧರಿಸಿದ್ದಳು

ಜಾಹೀರಾತು
ಜಾಹೀರಾತು
ಜಾಹೀರಾತು

ಅದರಂತೆಯೇ ಪ್ರಿಯಾಂಕಾ ತಾಯಿಯ ಬಳಿ ಸ್ನೇಹಿತರ ಮನೆಗೆ ಹೋಗಲು ಮೊಬೈಲ್ ಬೇಕು ಎಂದು ಕೇಳಿದ್ದಾಳೆ. ಆದರೆ ತಾಯಿ ಮೊಬೈಲ್ ನೀಡಲು ನಿರಾಕರಿಸಿದ್ದಾರೆ. ಇದರಿಂದ ನೊಂದ ಬಾಲಕಿ ಮನೆಯಲ್ಲೇ ರೂಮಿಗೆ ಹೋಗಿ ನೇಣು ಹಾಕಿಕೊಂಡಿದ್ದಾಳೆ. ತುಂಬಾ ಸಮಯವಾದರೂ ರೂಮಿನ ಬಾಗಿಲು ತೆಗೆಯಲಿಲ್ಲ ಎಂದು ಕೊನೆಗೆ ಪೋಷಕರು ಗಾಬರಿಯಿಂದ ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಆಗ ಪ್ರಿಯಾಂಕಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಬಗ್ಗೆ ಮಾಹಿತಿ ತಿಳಿದು ಹನುಮಂತನಗರ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.