Thursday, January 23, 2025
ಸುದ್ದಿ

ಸರ್.ಎಂ.ವಿ ಸಾಧನೆ ಸ್ಮರಿಸಿದ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನವಿಂದು ಅವರ ಹುಟ್ಟುಹಬ್ಬವನ್ನು ದೇಶಾದ್ಯಂತ ಎಂಜಿನಿಯರ್‍ ಗಳ ದಿನವನ್ನಾಗಿ ಆಚರಿಸಲಾಗುತ್ತದೆ.

ಇಂಜಿನಿಯರ್‌ಗಳ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ದೇಶದ ಇಂಜಿನಿಯರ್‌ಗಳ ಸೇವೆ ಮತ್ತು ಶ್ರಮವನ್ನು ಕೊಂಡಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಇಂಜಿನಿಯರ್‌ಗಳ ದಿನ. ದೇಶದ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಸರ್.ಎಂ.ವಿ ಅವರ ಜನ್ಮದಿನವನ್ನು ಇಂಜಿನಿಯರ್‌ ದಿನವನ್ನಾಗಿ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಇಂಜಿನಿಯರ್‌ಗಳು ಮತ್ತು ತಂತ್ರಶಿಲ್ಪಿಗಳಿಗೆ ನಾನು ಶುಭಾಶಯ ಕೋರುತ್ತೇನೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸರ್.ಎಂ.ವಿಶ್ವೇಶ್ವರಯ್ಯನವರು ಡ್ಯಾಂಗಳನ್ನು ನಿರ್ಮಾಣ ಮಾಡುವ ಮೂಲಕ ಅಮೂಲ್ಯ ಜಲಸಂಪನ್ಮೂಲ ರಕ್ಷಣೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನೈಪುಣ್ಯತೆ ಮತ್ತು ಕಾರ್ಯದಕ್ಷತೆ ನಮ್ಮ ಎಂಜಿನಿಯರ್‍ ಗಳಿಗೆ ಮಾದರಿಯಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಟ್ವೀಟರ್‍ ನಲ್ಲಿ ಶ್ಲಾಘಿಸಿದ್ದಾರೆ.