Wednesday, January 22, 2025
ರಾಜಕೀಯ

ಜೆಡಿಎಸ್‍ನಲ್ಲಿ ಉಲ್ಪಣಗೂಂಡ ಆಂತರಿಕ ಬಂಡಾಯ – ಕಹಳೆ ನ್ಯೂಸ್

ಬೆಂಗಳೂರು: ಜೆಡಿಎಸ್‍ನಿಂದ ಕೆಲವು ಶಾಸಕರು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ವಿರುದ್ಧ ತಿರುಗಿ ಬಿದ್ದಿದ್ದು, ಇನ್ನಷ್ಟು ಶಾಸಕರು ಬಂಡಾಯದ ಹಾದಿ ತುಳಿಯುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಸಾ ರಾ ಮಹೇಶ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವರ ಈ ಹೇಳಿಕೆ ಇನ್ನಷ್ಟು ಶಾಸಕರು ಪಕ್ಷ ತೊರೆಯುವ ಮುನ್ಸೂಚನೆಗೆ ಪುಷ್ಠಿ ದೊರೆತಂತಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ನೋವುಂಡ ಕುಮಾರ ಸ್ವಾಮಿ ಅವರಿಗೆ ಇದೀಗ ನಮ್ಮ ಶಾಸಕರ ಪೈಕಿ ಹಲವು ಮಂದಿ ಪಕ್ಷ ಬಿಡುವ ಬಗ್ಗೆ ಯೋಚನೆಯಲ್ಲಿದ್ದಾರೆ ಎಂದು ಹೇಳುವ ಮೂಲಕ ಜೆಡಿಎಸ್ ನಲ್ಲಿ ಬಂಡಾಯ ಉಲ್ಬಣಗೊಳ್ಳುವ ಸಾಧ್ಯತೆ ಬಗ್ಗೆ ಸಾ ರಾ ಮಹೇಶ್ ಸುಳಿವು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಜೆಡಿಎಸ್‍ನ ಜಿ.ಟಿ. ದೇವೇಗೌಡರ ನೇತೃತ್ವದ 12 ಕ್ಕೂ ಹೆಚ್ಚು ಶಾಸಕರು ಬಾಹ್ಯ ಬೆಂಬಲ ನೀಡಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧು ಸ್ವಾಮಿ ಹೇಳಿದ್ದರು. ಇದರ ಬೆನ್ನಲ್ಲೇ, ಜಿ.ಟಿ. ದೇವೇಗೌಡ, ಗುಬ್ಬಿ ಶ್ರೀನಿವಾಸ್ ಅವರು ಬಹಿರಂಗವಾಗಿ ಕುಮಾರ ಸ್ವಾಮಿ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.