Tuesday, January 21, 2025
ಸುದ್ದಿ

ಪಾಕಿಸ್ತಾನದಿಂದ 2,050 ಬಾರಿ ಕದನ ವಿರಾಮ ಉಲ್ಲಂಘನೆ-ಕಹಳೆ ನ್ಯೂಸ್

ದೆಹಲಿ: ಪ್ರಸಕ್ತ ವರ್ಷದಲ್ಲಿ ಪಾಕಿಸ್ತಾನ ಸೇನೆ 2,050 ಬಾರಿ ಕದನ ವಿರಾಮ ಉಲ್ಲಂಘಿಸಿ, ಗುಂಡಿನ ದಾಳಿ ನಡೆಸಿದ್ದು 21 ಭಾರತೀಯರು ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದೊಳಗೆ ಉಗ್ರರ ಒಳ ನುಸುಳುವಿಕೆಗೆ ಸಹಾಯ, ಭಾರತೀಯ ನಾಗರಿಕರು ಮತ್ತು ಗಡಿ ಪೋಸ್ಟ್‍ಗಳನ್ನು ಗುರಿಯಾಗಿಸಿಕೊಂಡು, ಪಾಕ್ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

2003ರ ಒಪ್ಪಂದವನ್ನು ಪಾಲಿಸುವಂತೆ ಮತ್ತು ಅಂತರಾಷ್ಟ್ರೀಯ ಗಡಿ ಹಾಗೂ ಗಡಿ ನಿಯಂತ್ರಣ ರೇಖೆ ಬಳಿ ಶಾಂತಿ ಕಾಪಾಡುವಂತೆ, ನಾವು ಪಾಕಿಸ್ತಾನಕ್ಕೆ ಸಂದೇಶ ಕಳುಹಿಸುತ್ತಲೇ ಇದ್ದೇವೆ. ಈ ರೀತಿಯ ಗುಂಡಿನ ದಾಳಿಗಳನ್ನು, ಭಾರತೀಯ ಪಡೆಗಳು ಅತ್ಯಂತ ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿವೆ. ಅಪ್ರಚೋದಿತ ಗುಂಡಿನ ದಾಳಿ ಮತ್ತು ಗಡಿಯೊಳಗೆ ಉಗ್ರರ ನುಸುಳುವಿಕೆ ಯತ್ನಗಳಿಗೆ ನಾವು ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡಿದ್ದೇವೆ ಎಂದು ತಿಳಿಸಿದ್ದಾರೆ.