Tuesday, January 21, 2025
ಸುದ್ದಿ

ಎಕ್ಕಾರು ಗ್ರಾಮದ ಅಕ್ಷಯ ಶೆಟ್ಟಿ ನಾಪತ್ತೆ -ಕಹಳೆ ನ್ಯೂಸ್

ಬಜ್ಪೆ: ಸೆ.16 ರಂದು ಬಡಗ ಎಕ್ಕಾರು ಗ್ರಾಮದ ಎಕ್ಕಾರು ಪ್ರಾಥಮಿಕ ಶಾಲಾ ಬಳಿಯ ನಿವಾಸಿ ಅಕ್ಷಯ ಶೆಟ್ಟಿ(22) ಎಂಬುವವರು ಸೆ.13ರಿಂದ ನಾಪತ್ತೆಯಾಗಿರುವ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.13ರಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸ್ ಮನೆಗೆ ಬಾರದೇ ಕಾಣೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಅಕ್ಷಯ ಶೆಟ್ಟಿ 6 ಅಡಿ ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ನಾಪತ್ತೆಯಾಗುವ ಸಂದರ್ಭ ನೀಲಿಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ತುಳು ಕನ್ನಡ, ಹಿಂದಿ ಹಾಗೂ ಬ್ಯಾರಿ ಭಾಷೆಯನ್ನು ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಜ್ಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ. ಕಾಣೆಯಾದವರ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು