Monday, January 20, 2025
ಸುದ್ದಿ

ದ.ಕ.ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 2019-20 ನೇ ಸಾಲಿನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅನುಷ್ಠಾನ ಕುರಿತು ತರಬೇತಿ – ಕಹಳೆ ನ್ಯೂಸ್

ಬಂಟ್ವಾಳ: ದ.ಕ.ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ತಾಲೂಕು ಮಟ್ಟದ ಸಹಕಾರ ಇಲಾಖೆ ಮತ್ತು ಸಹಕಾರ ಸಂಘಗಳ ಬ್ಯಾಂಕ್‍ಗಳ ಹಾಗೂ ಸೌಹಾರ್ದ ಸಹಕಾರಿಗಳ ಅಧಿಕಾರಿಗಳಿಗೆ 2019-20 ನೇ ಸಾಲಿನ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದ ಅನುಷ್ಠಾನ ಕುರಿತು ತರಬೇತಿ ಕಾರ್ಯಗಾರ ಕಾರ್ಯಕ್ರಮ ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ಸಹಕಾರ ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್ ಕೆ ಸಹಕಾರಿ ಸಂಘಗಳ ಸದಸ್ಯರ ಮಾಹಿತಿ ಪಡೆದು ಮತದಾರರ ಸೇರ್ಪಡೆ ಹಾಗೂ ತಿದ್ದುಪಡಿ ಕಾರ್ಯವನ್ನು ಅಕ್ಟೋಬರ್ 15 ರ ಒಳಗೆ ಮಾಡಬೇಕು ಎಂದು ಅವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮಾಹಿತಿ ಸಂಗ್ರಹ ಮಾಡಿದ ಬಳಿಕ ಕ್ಲಪ್ತ ಸಮಯದಲ್ಲಿ ಬಂಟ್ವಾಳ ತಹಶೀಲ್ದಾರ್ ಅವರಿಗೆ ನೀಡುವಂತೆಯೂ ಇದೇ ಸಂದರ್ಭದಲ್ಲಿ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮತದಾರರ ಪರಿಷ್ಕರಣೆ ಕುರಿತು ಮಾಹಿತಿಯನ್ನು ಸರಕಾರಿ ಪಾಲಿಟೆಕ್ನಿಕ್ ನ ಉಪನ್ಯಾಸಕ ಸನತ್ ರಾವ್ ನೀಡಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಪ್ರಭಾರ ಚುನಾವಣಾ ಉಪತಹಶೀಲ್ದಾರ್ ಸೀತಾರಾಮ ಕೆ. ಚುನಾವಣಾ ವಿಭಾಗದ ಸಿಬ್ಬಂದಿ ರಾಜಕುಮಾರ್, ಎಸ್.ಸಿ.ಡಿ.ಸಿ.ಬ್ಯಾಂಕ್ ಬಂಟ್ವಾಳ ಶಾಖಾ ವ್ಯವಸ್ಥಾಪಕ ವಿಜಯ್ ಮತ್ತು ಬಂಟ್ವಾಳ ಕೃಷಿ ಪತ್ತಿನ ಸಹಕಾರ ಸಂಘ ಒಕ್ಕೂಟದ ಅಧ್ಯಕ್ಷ ಸುಧಾಕರ ಉಪಸ್ಥಿತರಿದ್ದರು. ಕೆ.ಎಂ.ಎಪ್.ನ ವಿಸ್ತರಣಾಧಿಕಾರಿ ಜಗದೀಶ್ ಎ ಸ್ವಾಗತಿಸಿ ವಂದಿಸಿದರು.