Recent Posts

Monday, January 20, 2025
ಸುದ್ದಿ

ಫಿಲೋಮಿನಾ ಎಮ್‍ಎಸ್‍ಡ್ಲೂವಿಭಾಗದಲ್ಲಿ ಜೀವನ ಕೌಶಲ್ಯಾಬಿವೃದ್ದಿ ತರಬೇತಿ ಕಾರ್ಯಾಗಾರ – ಕಹಳೆ ನ್ಯೂಸ್

ಪುತ್ತೂರು: ಮಾನವನ ಜೀವನದ ಎಲ್ಲಾ ಮಜಲುಗಳಲ್ಲಿಯೂ ಅಭಿವೃದ್ಧಿಯನ್ನು ಸಾಧಿಸುವ ಸಂದರ್ಭದಲ್ಲಿ ಸವಾಲುಗಳು ಎದುರಾಗುವುದು ಸರ್ವೇ ಸಾಮಾನ್ಯ. ಆಗ ಪರಿಸ್ಥಿಯನ್ನು ಅವಲೋಕಿಸಿ, ಸ್ವ ಅರಿವು ಬಳಸಿಕೊಳ್ಳುವ ಮೂಲಕ ಅಭಿವೃದ್ಧಿಯ ಶಿಖರವನ್ನು ತಲುಪಬಹುದು ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇಲ್ಲಿನ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಸನ್ನ ಕುಮಾರ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗವು ಐಕ್ಯೂಎಸಿ ಸಹಯೋಗದಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಾಭಿವೃದ್ಧಿ ಕುರಿತು ಆಯೋಜಿಸಿದ ಒಂದು ದಿನದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಾತನಾಡಿದರು. ವೈಯಕ್ತಿಕ ಬದುಕು ಮತ್ತು ವೃತ್ತಿ ಬದುಕು ಎನ್ನುವ ಎರಡೂ ಹಂತಗಳಲ್ಲಿ ನಾನಾ ರೀತಿಯ ಸಮಸ್ಯೆಗಳು ಬಂದೊದಗುತ್ತವೆ. ಸೂಕ್ತ ಜ್ಞಾನ ಮತ್ತು ಕೌಶಲಗಳ ಮೂಲಕ ಇಂತಹ ಸಂದಿಗ್ಧ ಪರಿಸ್ಥಿಯನ್ನು ಎದುರಿಸಬಹುದು. ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ತಕ್ಕುದಾದ ಸಾಮಥ್ರ್ಯವನ್ನು ಸಂಪಾದಿಸಿಕೊಳ್ಳಬೇಕು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಿಟ್ಲ ಸಪ್ರದ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಜ್ಯೋತಿ ಇವರು ವಿವಿಧ ಚಟುವಟಿಕೆಗಳನ್ನು ನಡೆಸುವುದರ ಮೂಲಕ ಒತ್ತಡಗಳ ನಿರ್ವಹಣೆ ಮತ್ತು ಜೀವನದಲ್ಲಿ ಯಶಸ್ಸು ಗಳಿಸುವ ಕುರಿತು ವಿವರಿಸಿದರು.

ಇನೋರ್ವ ಸಂಪನ್ಮೂಲ ವ್ಯಕ್ತಿಯಾದ ವಿಟ್ಲ ಸಪ್ರದ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಸೌಮ್ಯ ಇವರು ಸಮಸ್ಯೆಗಳು ಬಂದೊದಗಿದಾಗ ಸರಿಯಾದ ನಿರ್ಧಾರಗಳ ಆಯ್ಕೆಯ ವಿಧಾನ ಹಾಗೂ ಯಶಸ್ವೀ ಬದುಕಿನ ಕುರಿತು ವಿಷಯ ಮಂಡಿಸಿದರು.

ವಿದ್ಯಾರ್ಥಿನಿ ಅಕ್ಷತಾ ಪ್ರಾರ್ಥಿಸಿದರು. ವಿಭಾಗ ಸಂಯೋಜಕಿ ಶ್ರೀಮಣಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿ, ಸ್ವಾಗತಿಸಿದರು. ವಿದ್ಯಾರ್ಥಿನಿ ಸಾರಮ್ಮ ಕಾರ್ಯಕ್ರಮ ನಿರೂಪಿಸಿದರು.