Recent Posts

Sunday, January 19, 2025
ಸುದ್ದಿ

ಕಾಪುವಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೇಸ್‍ನಿಂದ ಬೃಹತ್ ಪ್ರತಿಭಟನೆ- ಕಹಳೆ ನ್ಯೂಸ್

ಕಾಪು: ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಗೂ ಮುನ್ನ ವಿದ್ಯಾನಿಕೇತನ್ ಶಾಲೆಯ ಬಳಿಯಿಂದ ರ್ಯಾಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೋಟಾರು ವಾಹನ ಕಾಯ್ದೆ ಜನರನ್ನು ದರೋಡೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಭೀಕರ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿ ಜನರ ಸಂಕಷ್ಟಕ್ಕೆ ಸ್ಪಂದಿಸದಿರುವ ಮತ್ತು ಈವರೆಗೆ ಒಂದು ಬಿಡಿಗಾಸು ಪರಿಹಾರವನ್ನ ಘೋಷಿಸದೇ ಭಂಡತನ ಪ್ರದರ್ಶಿಸುತ್ತಿದೆ.
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ನೆರೆ ಸಂತ್ರಸ್ತರನ್ನು ಸಂಪೂರ್ಣ ನಿರ್ಲಕ್ಷ್ಯಿಸಿದೆ. ಉಡುಪಿ ಜಿಲ್ಲೆಯ ಮರಳು ಸಮಸ್ಯೆಯನ್ನು ಪರಿಹರಿಸಲು ಯಾವುದೇ ರೀತಿಯ ಆಸಕ್ತಿ ತೋರಿಸುತ್ತಿಲ್ಲ ಎಂದು ದೂರಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೋಪಾಲ ಪೂಜಾರಿ, ಅಶೋಕ್ ಕುಮಾರ್ ಕೊಡವೂರು, ಯು.ಆರ್.ಸಭಾಪತಿ ಮತ್ತಿತರರು ಉಪಸ್ಥಿತರಿದ್ದರು.