Recent Posts

Sunday, January 19, 2025
ಸುದ್ದಿ

ಅಧಿಕಾರವನ್ನುಸಮಾಜದ ಒಳಿತಿಗಾಗಿ ಬಳಸಿಕೂಳ್ಳಬೇಕು,ಡಿಸಿಎಂ ಡಾ.ಅಶ್ವಥ್ ನಾರಾಯಣ್- ಕಹಳೆ ನ್ಯೂಸ್

ಕಂದಾಯ ಸಚಿವ ಆರ್.ಅಶೋಕ್ ಹಾಗೂ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಭಿನ್ನಾಭಿಪ್ರಾಯಗಳೇನೇ ಇದ್ದರೂ ಕೂತು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಬಿಜೆಪಿ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಾ ಅಶೋಕ್ ತಮಗೆ ಅಣ್ಣನ ಸಮಾನ. ಅಧಿಕಾರ ಶಾಶ್ವತವಲ್ಲ. ಯಾವುದೋ ಕಾರಣಕ್ಕೆ ಅಧಿಕಾರ ಸಿಕ್ಕಿದೆ. ಅದನ್ನು ಸಮಾಜದ ಒಳಿತಿಗಾಗಿ ಬಳಕೆ ಮಾಡಿಕೊಳ್ಳಬೇಕು. ಅಧಿಕಾರ ಶಾಶ್ವತವಲ್ಲ, ಸಂಬಂಧಗಳು ಮಾತ್ರ ಶಾಶ್ವತ. ಸಂಬಂಧಗಳನ್ನು ನಾವು ಶಾಶ್ವತವಾಗಿ ಉಳಿಸಿಕೊಳ್ಳಬೇಕು. ಅಧಿಕಾರ ಯಾವಾಗಲೂ ಇರುವುದಿಲ್ಲ. ಅಶೋಕ್ ಮತ್ತು ತಮ್ಮನಡುವೆ ಯಾವುದೇ ಮನಸ್ತಾಪ ಇದ್ದರೂ ಅದನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು