Recent Posts

Monday, January 20, 2025
ಸುದ್ದಿ

ಈಶ್ವರಪ್ಪ ಹೇಳಿಕೆ ಬಗ್ಗೆ ಮುಸ್ಲಿಂ ಸಂಘಟನೆಗಳ ಖಂಡನೆ- ಕಹಳೆ ನ್ಯೂಸ್

ಮತಬ್ಯಾಂಕ್ ರಾಜಕೀಯಕ್ಕಾಗಿ ಮುಸ್ಲಿಂ ಸಮುದಾಯ ಮತ್ತು ಮಂಗಳಮುಖಿಯರನ್ನು ಅವಮಾನಿಸುವಂತಹ ಹೇಳಿಕೆ ನೀಡುವ ಮೂಲಕ, ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಇತ್ತೀಚಿಗೆ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದಿರುವ ಮುಸ್ಲಿಂ ಸಂಘಟನೆಗಳು ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿವೆ.

ಭಾರತ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರಕಾರ ಯಾರು ಯಾರಿಗೆ ಬೇಕಾದರೂ ಮತ ಹಾಕಬಹುದು ಅಥವಾ ಯಾವುದೇ ಅಭ್ಯರ್ಥಿಯು ಯಾವುದೇ ಸಮುದಾಯದ ಮತಗಳನ್ನು ಪಡೆಯಬಹುದು. ಆದರೆ ಇದರ ಬಗ್ಗೆ ಕನಿಷ್ಠ ಜ್ಞಾನವೂ ಇಲ್ಲದ ಈಶ್ವರಪ್ಪ “ಮುಸಲ್ಮಾನರ ಮತ ಪಡೆಯುವ ಶಾಸಕರು ಹಿಜಿಡಾಗಳು” ಎಂಬ ಹೇಳಿಕೆ ನೀಡುವ ಮೂಲಕ ಮತ್ತೆ ತನ್ನ ಮಾನಸಿಕತೆಯನ್ನು ಪ್ರದರ್ಶಿಸಿದ್ದಾರೆ. ಈ ಮೂಲಕ ತಾನು ಜನಪ್ರತಿನಿಧಿಯಾಗಿರಲು ಅನರ್ಹ ಎಂಬುದನ್ನು ಧೃಢಪಡಿಸಿರುತ್ತಾರೆ ಎಂದು ಎಸ್‍ಡಿಪಿಐ ಪಕ್ಷದ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರತಿಕ್ರಿಯಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು