Monday, November 25, 2024
ಸುದ್ದಿ

ಬ್ರೋಕರ್‍ ಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ದಾವಣಗೆರೆ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ -ಕಹಳೆ ನ್ಯೂಸ್

ದಾವಣಗೆರೆ : ನೂತನ ಐಎಂವಿ ಕಾಯ್ದೆ ಜಾರಿಗೊಂಡ ನಂತರ ಎಲ್‍ಎಲ್‍ಆರ್, ಡಿಎಲ್ ಮಾಡಿಸಲು ಜನ ಮುಗಿ ಬಿದ್ದು ಬರುತ್ತಿದ್ದಾರೆ. ಇದರಿಂದ ಮಿತಿ ಮೀರಿದ ಬ್ರೋಕರ್‍ ಗಳ ಹಾವಳಿ ಹೆಚ್ಚಾದ ಹಿನ್ನೆಲೆ ಮಂಗಳವಾರ ಇಲ್ಲಿನ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿ, 15ಕ್ಕೂ ಹೆಚ್ಚು ಬ್ರೋಕರ್‍ ಗಳನ್ನು ಹಾಗೂ 1,76,855 ರು.ಗಳನ್ನು ವಶಕ್ಕೆ ಪಡೆದಿದೆ.

ನಗರದ ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಲ್ಲಿ ಹೊಸದಾಗಿ ವಾಹನ ಚಾಲನಾ ಪರವಾನಿಗೆ ಪಡೆಯಲು, ಎಲ್‍ಎಲ್‍ಆರ್ ಪಡೆಯಲು ಬರುವವರ ಸಂಖ್ಯೆ ಹೆಚ್ಚಾಗಿದ್ದಾರೆ. ನಿಗದಿತ ದರಕ್ಕಿಂತ ದುಪ್ಪಟ್ಟು ಹಣ ವಸೂಲು ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ, ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಪರಮೇಶ್ವರಪ್ಪ ನೇತೃತ್ವ ತಂಡ ದಾಳಿ ನಡೆಸಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆರ್‍ ಟಿಓ ಕಚೇರಿಯಲ್ಲಿ ಬ್ರೋಕರ್‍ ಗಳು ಎಲ್‍ಎಲ್‍ಆರ್, ಡಿಎಲ್ ಮಾಡಿಸಿ ಕೊಡುವುದಾಗಿ ಜನರಿಂದ ದುಪ್ಪಟ್ಟು ಹಣವನ್ನು ಪಡೆಯುತ್ತಿದ್ದ 15ಕ್ಕೂ ಹೆಚ್ಚು ಬ್ರೋಕರ್‍ ಗಳನ್ನು ವಶಕ್ಕೆ ಪಡೆದ ಎಸಿಬಿ ಅಧಿಕಾರಿ, ಸಿಬ್ಬಂದಿಗಳ ತಂಡವು ಸಾರ್ವಜನಿಕರಿಂದ ಬ್ರೋಕರ್‍ ಗಳು ಪಡೆದಿದ್ದ 1.76 ಲಕ್ಷ ರು.ಗೂ ಅಧಿಕ ಹಣವನ್ನು ಜಪ್ತು ಮಾಡಿದ್ದಾರೆ. ಡಿಎಲ್, ಎಲ್‍ಎಲ್‍ಆರ್ ಮಾಡಿಸಿಕೊಡುವುದಾಗಿ ಜನರಿಗೆ ವಂಚಿಸುತ್ತಿದ್ದವರನ್ನು ಗುರಿಯಾಗಿಟ್ಟುಕೊಂಡು ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು