ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದು, ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಇಡಿ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆದರೆ ಕೇಸ್ ಸಂಬಂಧ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೂ ನೋಟಿಸ್ ನೀಡಿದ್ದು ನಾಳೆ ಹಾಜರಾಗುವಂತೆ ಸೂಚನೆ ಕೂಡಲಾಗಿದೆ.
ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಣದ ವ್ಯವಹಾರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೆಸರು ಥಳುಕು ಹಾಕಿಕೂಂಡಿದ್ದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಸೆಪ್ಟಂಬರ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಶಾಸಕಿಗೆ ಇಡಿ ನೋಟಿಸ್ ನೀಡಿದ್ದು ವಿಚಾರಣೆಗೆ ಹಾಜರಾಗಲಿದ್ದಾರೆ.