Recent Posts

Monday, January 20, 2025
ಸುದ್ದಿ

ಸೆ.30ರಿಂದಲೇ ದಸರಾ ರಜೆ ಮಂಜೂರು ಮಾಡಲು ಉಪಮುಖ್ಯಮಂತ್ರಿಗಳಿಗೆ ಶಾಸಕ ಕಾಮತ್ ಮನವಿ-ಕಹಳೆ ನ್ಯೂಸ್

ನವರಾತ್ರಿ ಸಂಭ್ರಮ ಸೆಪ್ಟೆಂಬರ್ 30 ರಿಂದಲೇ ಆರಂಭವಾಗಲಿದ್ದು, ಅದಕ್ಕೆ ಸರಿಯಾಗಿ ದಸರಾ ರಜೆಯನ್ನು ಮಂಜೂರು ಮಾಡಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರೂ ಆಗಿರುವ ಅಶ್ವಥ್ ನಾರಾಯಣ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಅವರನ್ನು ಭೇಟಿಯಾದ ಶಾಸಕ ಕಾಮತ್ ಅವರು ಮೈಸೂರು ದಸರಾದಂತೆಯೇ ಮಂಗಳೂರು ದಸರಾ ಕೂಡ ಅತ್ಯಂತ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಮಂಗಳೂರಿನಲ್ಲಿ ನವರಾತ್ರಿಯ ಧಾರ್ಮಿಕ ವಿಧಿವಿಧಾನಗಳು ಸೆ.29 ರಿಂದಲೇ ಆರಂಭವಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನವರಾತ್ರಿಯಲ್ಲಿ ಭಾಗವಹಿಸುವ ಪೋಷಕರಿಗೆ, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ, ಭೋದಕ ವರ್ಗಕ್ಕೆ, ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ ಇದ್ದಲ್ಲಿ ಸಾಕಷ್ಟು ಅನುಕೂಲವಾಗುತ್ತದೆ. ಅ.6 ರಿಂದ ರಜೆ ನೀಡಿದರೆ ಅದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ತುಂಬಾ ಅನಾನುಕೂಲವಾಗುತ್ತದೆ. ಈ ಬಗ್ಗೆ ಪರಾಮರ್ಶಿಸಿ ಸೆ.30 ರಿಂದ ದಸರಾ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸುತ್ತೋಲೆ ಹೊರಡಿಸಬೇಕು ಎಂದು ಶಾಸಕ ಕಾಮತ್ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು