Recent Posts

Monday, April 14, 2025
ಸುದ್ದಿ

ಉಳ್ಳಾಲದಲ್ಲಿ ತಡರಾತ್ರಿ ಇತ್ತಂಡಗಳ ನಡುವೆ ಶೂಟೌಟ್ – ಆರೋಪಿಗಳ ಬಂಧನ – ಕಹಳೆ ನ್ಯೂಸ್

ಉಳ್ಳಾಲ, ಸೆ 23 : ಇಲ್ಲಿನ ಮುಕ್ಕಚ್ಚೇರಿ ಸಮೀಪದ ಕಡಪರ ಎಂಬಲ್ಲಿ ಭಾನುವಾರ ತಡರಾತ್ರಿ ಎರಡು ತಂಡಗಳ ನಡುವಿನ ಹೊಡೆದಾಟ ಹಾಗೂ ಶೂಟೌಟ್ ನಡೆದಿದ್ದು. ಈ ಪ್ರಕರಣಕ್ಕೆ ಸಂಬಂಧಿಸಿ ಹಲವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆಘಟನೆಯಲ್ಲಿ ಸುಹೈಲ್ ಕಂದಕ್ ಹಾಗೂ ಕಡಪರ ನಿವಾಸಿ ಇರ್ಶಾದ್(20) ಎಂವರು ಗಾಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆರಂಭದಲ್ಲಿ ವಾಟ್ಸ್‌ಆಯಪ್ ಸಂದೇಶದ ವಿಚಾರವಾಗಿ ಸುಹೈಲ್ ಕಂದಕ್ ಮತ್ತು ಸಲ್ಮಾನ್ ನಡುವೆ ಮೊಬೈಲ್ ಫೋನ್ ಮೂಲಕ ಮಾತಿನ ಚಕಮಕಿ ನಡೆದಿದೆ. ಇದು ತಾರಕಕ್ಕೇರಿದ್ದು, ಅತ್ತಾವರ ನಿವಾಸಿಯಾಗಿರುವ ಸುಹೈಲ್ ಕಂದಕ್ ಮತ್ತು ತಂಡ ರಾತ್ರಿ 11:30ರ ಸುಮಾರಿಗೆ ಕಡಪರಕ್ಕೆ ತೆರಳಿದ್ದು, ಅಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶೂಟೌಟ್ ನಡೆಸಿದ ಆಯುಧವನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ, ದೂರು, ಪ್ರತಿದೂರುಗಳು ದಾಖಲಾಗಿವೆ. ಇರ್ಶಾದ್ ನೀಡಿರುವ ದೂರಿನನ್ವಯ ಬಶೀರ್, ಸುಹೈಲ್ ಕಂದಕ್ ಮತ್ತು ತಂಡದ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ.

ಇನ್ನೊಂದು ಪ್ರಕರಣದಲ್ಲಿ ಸುಹೈಲ್ ಕಂದಕ್ ನೀಡಿರುವ ದೂರಿನ್ವಯ ಸಲ್ಮಾನ್ ಮತ್ತು 10 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ..

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ