Recent Posts

Sunday, January 19, 2025
ಸುದ್ದಿ

ಜನರ ಬೇಡಿಕೆಗಳನ್ನು ಈಡೇರಿಸಲು ಶಕ್ತಿ ಮೀರಿ ಪ್ರಯತ್ನಿಸುತ್ತೇನೆ – ಶಾಸಕ ಕಾಮತ್- ಕಹಳೆ ನ್ಯೂಸ್

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಜಲ್ಲಿಗುಡ್ಡೆಯ ಜಯನಗರ ಪ್ರದೇಶಕ್ಕೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಕಳೆದ ಕೆಲ ವರ್ಷಗಳ ಹಿಂದೆ ಈ ಪ್ರದೇಶವು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದ್ದು ಅದಕ್ಕೂ ಮೊದಲು ಈ ಭಾಗ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ್ದಾಗಿತ್ತು. ಈ ಪ್ರದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಆಗಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲಭೂತ ಸೌಕರ್ಯಗಳು ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆಯಬೇಕಿದೆ. ಈ ಕ್ಷೇತ್ರದ ಶಾಸಕನ ನೆಲೆಯಲ್ಲಿ ಇಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ನನ್ನ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದಿದ್ದಾರೆ.
ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡರಾದ ಸಂಜಯ್ ಪ್ರಭು,ವಸಂತ್ ಜೆ ಪೂಜಾರಿ, ವಾರ್ಡ್ ಅಧ್ಯಕ್ಷ ವೇಣುಗೋಪಾಲ್, ಕಾರ್ಯದರ್ಶಿ ಚಂದ್ರಶೇಖರ್ ಜಯನಗರ, ಮಂಡಲ ಸದಸ್ಯರಾದ ಶಿವಾಜಿ ರಾವ್, ಯಶವಂತ ಶೆಟ್ಟಿ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು