Saturday, September 21, 2024
ಸುದ್ದಿ

ಮಂಗಳೂರು : ‘ನನ್ನ ಬೀಟ್-ನನ್ನ ಹೆಮ್ಮೆ’ ಎಂಬ ಹೊಸ ಸ್ವರೂಪದ ಪೊಲೀಸ್ ಬೀಟ್ ವ್ಯವಸ್ಥೆ ರಾಜ್ಯದಲ್ಲೂ ವಿಸ್ತರಣೆ –ಕಹಳೆ ನ್ಯೂಸ್

ಮಂಗಳೂರು : ನಾಗರಿಕರ ಸಹಭಾಗಿತ್ವದಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಚನೆಗೊಂಡಿರುವ ‘ನನ್ನ ಬೀಟ್-ನನ್ನ ಹೆಮ್ಮೆ’ ಎಂಬ ಹೊಸ ಸ್ವರೂಪದ ಪೊಲೀಸ್ ಬೀಟ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರುವ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ(ಡಿಜಿ-ಐಜಿಪಿ)ನೀಲಮಣಿ ಎನ್. ರಾಜು ಉತ್ಸುಕತೆ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕರಾವಳಿ ಜಿಲ್ಲೆ ಭೇಟಿ ವೇಳೆ ಮಂಗಳೂರಿನ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ಅವರು ಪೊಲೀಸ್ ಅಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿ ಈ ವಿಚಾರ ತಿಳಿಸಿದರು. ಮಂಗಳೂರಿನಲ್ಲಿ ಜಾರಿಗೆ ತಂದಿರುವ ಹೊಸ ಬೀಟ್ ವ್ಯವಸ್ಥೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ ನೀಲಮಣಿ ರಾಜು ಅವರು, ನಾಗರಿಕರು ಮತ್ತು ಪೊಲೀಸರ ಮಧ್ಯೆ ಸೇತುವಾಗಿ ಈ ಬೀಟ್ ವ್ಯವಸ್ಥೆ ಕಾರ್ಯ ನಿರ್ವಹಿಸುತ್ತಿರುವುದನ್ನು ತಿಳಿದುಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೇ ಮಾದರಿ ಬೀಟ್ ವ್ಯವಸ್ಥೆಯನ್ನು ರಾಜ್ಯಾದ್ಯಂತ ಜಾರಿಗೆ ತರುವ ನಿಟ್ಟಿನಲ್ಲಿ ವಿಸೃತ ಯೋಜನಾ ವರದಿ ಕಳುಹಿಸಿಕೊಡುವಂತೆ ನೀಲಮಣಿ ರಾಜು ಅವರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜಾಹೀರಾತು