Recent Posts

Monday, January 20, 2025
ಸುದ್ದಿ

ಎಡಿಜಿಪಿ ಅಶೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ – ಕಹಳೆ ನ್ಯೂಸ್

ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧಿಸಿ, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಎಡಿಜಿಪಿ ಅಶೋಕ್ ಕುಮಾರ್ ಮೇಲೆ, ಸಿಬಿಐ ಮುಂಜಾನೆ 5 ಗಂಟೆಗೆ ಎಂಜಿ ರಸ್ತೆಯಲ್ಲಿರುವ ತಮ್ಮ ನಿವಾಸದ ಮೇಲೆ ಹಠಾತ್ ದಾಳಿ ನಡೆಸಿದೆ. ಕೆಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ಹೈದರಾಬಾದ್ ವಿಭಾಗದ ಸಿಬಿಐ ಎಡಿಜಿಪಿ ದರ್ಜೆಯ ಅಧಿಕಾರಿಗಳ ನೇತೃತ್ವದಲ್ಲಿ, ಸುಮಾರು 20 ಜನರ ತಂಡ ಮಿಂಚಿನ ದಾಳಿ ನಡೆಸಿ ಪೆನ್‍ಡ್ರೈವ್, ಲ್ಯಾಪ್‍ಟಾಪ್, ಮೊಬೈಲ್ ಸೇರಿದಂತೆ ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿದ್ದು ಅಶೋಕ್ ಕುಮಾರ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು