Monday, January 20, 2025
ಸಿನಿಮಾ

ಕೆಜಿಎಫ್ 2 ಚಿತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಎಂಟ್ರಿ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ದಿಕ್ಕು ದೆಸೆ ಬದಲಿಸಿದ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ ಚಾಪ್ಟರ್ 2 ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಕಾರ್ಯಕಾರಿ ನಿರ್ಮಾಪಕ ಕಾರ್ತಿ ಗೌಡ ಜೊತೆ ಫೋಟೋ ತೆಗೆಸಿಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಾ ಇದ್ದು ಇದೀಗ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ್ದಾರೆ
2012ರಲ್ಲಿ ಅಗ್ನೀಪತ್ ಚಿತ್ರದಲ್ಲಿ ನಟಿಸಿದ್ದು ಅದು ತೆರೆಕಂಡಿತ್ತು. ಈ ಚಿತ್ರದಲ್ಲಿ ನೆಗೆಟಿವ್ ಶೇಡ್ ನಲ್ಲಿ ಕಾಣಿಸಿಕೊಂಡಿದ್ದೇ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗ ಅಧೀರಾ ಎಂಬ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಖುಷಿಯಾಗ್ತಾ ಇದೆ. ಅಗ್ನೀಪತ್ ಚಿತ್ರದ ನಂತರ ನನಗೆ ಸಿಕ್ಕ ಶ್ರೇಷ್ಠ ವಿಲನ್ ಪಾತ್ರ ಇದು ಎಂದು ಸಂಜಯ್ ದತ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕೆಜಿಎಫ್ ಚಾಪ್ಟರ್ 1 ಚಿತ್ರ ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಿ ದೇಶಾದ್ಯಂತ ಬರೋಬ್ಬರಿ 243 ಕೋಟಿ ರುಪಾಯಿಯನ್ನು ಗಳಿಸಿ ಕನ್ನಡದ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಬರೆದಿತ್ತು.