Monday, January 20, 2025
ಸುದ್ದಿ

ಮಹಾರಾಷ್ಟ್ರದ ಮಳೆಗೆ 7 ಬಲಿ -ಕಹಳೆ ನ್ಯೂಸ್

ಪುಣೆ: ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಭಾರೀ ಆವಂತರ ಸೃಷ್ಟಿಸಿದ್ದ ಮಳೆಯ ಆರ್ಭಟ ಈಗ ಪುಣೆ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ರೌದ್ರಾವತಾರ ಮುಂದುವರೆಸಿದೆ. ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಏಳು ಜನ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಕರ್ ನಗರ್ ಬಳಿ ಗೋಡೆಯೊಂದು ಕುಸಿದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಗಿದೆ. ಮತ್ತೊಂದೆಡೆ ಮುಂಬೈ ಖಾರ್ ಪ್ರದೇಶದಲ್ಲಿ ಮಂಗಳವಾರ ಕಟ್ಟಡದಡಿ ಸಿಲುಕಿ 10 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಂಗ್‍ದಬಾದ್‍ನಲ್ಲಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋದ ಕಾರೊಂದರಲ್ಲಿ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಪುಣೆ ಗ್ರಾಮವೊಂದರಲ್ಲಿ ಕೇವಲ ಮೂರು ಗಂಟೆ ಅವಧಿಯಲ್ಲಿ 112 ಮಿ ಮೀ ಮಳೆಯಾಗಿ ದಾಖಲೆ ಸೃಷ್ಟಿಯಾಗಿದೆ. ಇದರ ಜೊತೆಗೆ ಮುಂಬೈ ಪುಣೆ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆ ಮತ್ತು ಜಲಸಂಕಷ್ಟದಿಂದ ಎದುರಾಗಿರುವ ಪರಿಸ್ಥಿತಿ ನಿಭಾಯಿಸಲು ರಕ್ಷಣಾ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ.