Saturday, September 21, 2024
ಸುದ್ದಿ

ಪರಿಹಾರ ಕಾರ್ಯದ ಅವಲೋಕನೆಗೆ ನೆರೆ ಪೀಡಿತ ಪ್ರದೇಶಗಳಿಗೆ ಮತ್ತೊಮ್ಮೆ ಸಿಎಂ ಪ್ರವಾಸ – ಕಹಳೆ ನ್ಯೂಸ್

ಬೆಂಗಳೂರು : ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಯಾವ ರೀತಿಯ ಪರಿಹಾರ ಕಾರ್ಯಗಳು ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಈಗ ಹೇಗಿದೆ ಎಂಬುದರ ಅವಲೋಕನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರವಾಸ ಕೈಗೊಳ್ಳಲಿದ್ದಾರೆ. ತಿಂಗಳ ಹಿಂದೆ ಪ್ರವಾಹಕ್ಕೆ ಒಳಗಾದ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಸಿಎಂ, ಸಂತ್ರಸ್ತರಿಗೆ ಪರಿಹಾರ ಕಾರ್ಯವನ್ನು ನಡೆಸುವಂತೆ ಸೂಚನೆ ನೀಡಿದ್ದರು. ಆ ಕಾರ್ಯ ಹಾಗೂ ಅಭಿವೃದ್ಧಿ ಕೆಲಸಗಳ ಪ್ರಗತಿ ಕುರಿತು ಈ ಬಾರಿ ಭೇಟಿಯಲ್ಲಿ ಪರಿಶೀಲನೆ ನಡೆಸಲಿದ್ದಾರೆ.

ಕಳೆದೆರಡು ತಿಂಗಳ ಹಿಂದೆ ಭೀಕರ ಪ್ರವಾಹಕ್ಕೆ ತುತ್ತಾಗಿರುವ ಬೆಳಗಾವಿ, ಬಾಗಲಕೋಟ, ಯಾದಗಿರಿ, ವಿಜಯಪುರ ಜಿಲ್ಲೆಯ ಜನ ಈಗ ಮತ್ತೆ ಪ್ರವಾಹದ ಭೀತಿಗೆ ತುತ್ತಾಗಿದ್ದಾರೆ. ಎಲ್ಲ ಕಳೆದುಕೊಂಡು ಸಂತ್ರಸ್ತರ ಕೇಂದ್ರ ಸೇರಿರುವ ಅವರು, ಪರಿಹಾರದ ನಿರೀಕ್ಷೆಯಲ್ಲಿದ್ದು, ಅವರಿಗೆ ಸಾಂತ್ವನಾ ಹೇಳಲು ಸಿಎಂ ಮುಂದಾಗಲಿದ್ದಾರೆ.
ತಿಂಗಳ ಹಿಂದೆ ಪ್ರವಾಹಕ್ಕೆ ಒಳಗಾದ ಜಿಲ್ಲೆಗಳಿಗೆ ಭೇಟಿ ನೀಡಿದ್ದ ಸಿಎಂ, ಸಂತ್ರಸ್ತರಿಗೆ ಪರಿಹಾರ ಕಾರ್ಯವನ್ನು ನಡೆಸುವಂತೆ ಸೂಚನೆ ನೀಡಿದ್ದರು. ಆ ಕಾರ್ಯ ಹಾಗೂ ಅಭಿವೃದ್ಧಿ ಕೆಲಸಗಳ ಪ್ರಗತಿ ಕುರಿತು ಈ ಬಾರಿ ಭೇಟಿಯಲ್ಲಿ ಪರಿಶೀಲನೆ ನಡೆಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಕ್ಟೋಬರ್ 3ರಂದು ಬೆಳಗಾವಿಗೆ ತೆರಳಿರುವ ಅವರು 4ರಂದು ಬೆಳಗಾವಿ ಸಂತ್ರಸ್ತರ ಕುಂದುಕೊರತೆಗಳನ್ನು ಆಲಿಸಲಿರುವ ಸಿಎಂ ಬಳಿಕ ಅಥಣಿಯಲ್ಲಿ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲಿದ್ದಾರೆ. ಇದಾದ ಬಳಿಕ ಬಾಗಲಕೋಟೆಯಲ್ಲಿ ಪ್ರವಾಹ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.
ಅಂದು ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಹೂಡಲಿರುವ ಅವರು ಅ.5ರಂದು ಆಲಮಟ್ಟಿಗೆ ಬಾಗಿನ ಅರ್ಪಿಸಲಿದ್ದಾರೆ. ನಂತರ ಯಾದಗಿರಿಯ ಸುರಪುರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮತ್ತು ಪರಿಶೀಲನೆ ಕಾರ್ಯ ನಡೆಸಲಿದ್ದು, ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ.

ಜಾಹೀರಾತು

ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಈಗಾಗಲೇ ಬೆಳಗಾವಿಯಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆಗೆ ತಿರುಗೇಟು ನೀಡಿರುವ ಆಡಳಿತ ಪಕ್ಷದ ನಾಯಕರು ಭೀಕರ ಪ್ರವಾಹ ಪ್ರದೇಶಗಳಲ್ಲಿ ಪುರ್ನವಸತಿ ಹಾಗೂ ಪರಿಹಾರ ಕಾರ್ಯ ನಡೆಯುತ್ತಿದೆ. ಈಗಾಗಲೇ ರಾಜ್ಯ ಸರ್ಕಾರದಿಂದ 22 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗಳಿಗೆ 380 ಕೋಟಿ ಇದ್ದು, ಅದರ ಜೊತೆ ರಾಜ್ಯ ಸರ್ಕಾರದಿಂದ ಇದೀಗ 195 ಕೋಟಿಯನ್ನು ಬಿಡುಗಡೆ ಮಾಡಲಾಗಿದ್ದು, ನೆರೆ ಸಂತ್ರಸ್ತರ ಕಷ್ಟಕ್ಕೆ ಸ್ಪಂದಿಸುತ್ತಿದೆ ಎಂದಿದ್ದರು.