Thursday, January 23, 2025
ಸುದ್ದಿ

ಮಂಡೆಕೋಲು ಸ.ಉ.ಹಿ.ಪ್ರಾ.ಶಾಲೆಯಲ್ಲಿ “ಮಾನಸಿಕ ಆರೋಗ್ಯ ಕುರಿತು ಮಾಹಿತಿ ಕಾರ್ಯಗಾರ”-ಕಹಳೆ ನ್ಯೂಸ್

ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬೆಳ್ಳಾರೆ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ, ಗ್ರಾಮ ಪಂಚಾಯತ್ ಮಂಡೆಕೋಲು ಹಾಗೂ ಸರಕಾರಿ ಉನ್ನತ್ತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲು ಇವುಗಳ ಸಹಯೋಗದಲ್ಲಿ “ಮಾನಸಿಕ ಆರೋಗ್ಯದ ಕುರಿತು ಮಾಹಿತಿ ಕಾರ್ಯಗಾರ” ಕಾರ್ಯಕ್ರಮ ಹಿರಿಯ ಪ್ರಾಥಮಿಕ ಶಾಲೆ ಮಂಡೆಕೋಲುಯಲ್ಲಿ ನಡೆಯಿತು.

ಇನ್ನೂ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಜನರಿಗೆ ಆರೋಗ್ಯವೆಂದರೆ ಕ್ಯಾನ್ಸರ್, ಕ್ಷಯ, ಜ್ವರ ಮುಂತಾದವುಗಳಿಂದ ಮುಕ್ತವಾಗಿವುದು ಎಂದಷ್ಟೇ ಗೊತ್ತು, ಅದಕ್ಕಿಂತಲೂ ಹೆಚ್ಚಾಗಿ ಮನಸ್ಸಿಗೆ ಸಂಬಂಧಿಸಿದ ಆರೋಗ್ಯದ ಕುರಿತು ಅರಿವೇ ಇಲ್ಲವಾಗಿದೆ. ಇಂದು ಆ ಮಾನಸಿಕ ಆರೋಗ್ಯ ಕುರಿತು ಹಮ್ಮಿಕೊಂಡಿರುವ ಈ ಕಾರ್ಯಗಾರ ಯಶಸ್ವಿಯಾಗಲಿ, ಜನರಲ್ಲಿ ಇಂತಹ ಸಮಸ್ಯೆಗಳ ಕುರಿತು ಜಾಗೃತಿ ಮೂಡಲಿ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದ ಕುರಿತು ಮಾತನಾಡಿದ ಬೆಳ್ಳಾರೆ ಕಾಲೇಜು ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಉಪನ್ಯಾಸಕಿ ರಶ್ಮಿತಾ ಕರ್ಕೆರ ಪ್ರತಿಯೊಬ್ಬ ವ್ಯಕ್ತಿಗೂ ಮಾನಸಿಕ ಆರೋಗ್ಯ ಅತೀ ಅಗತ್ಯ, ವ್ಯಕ್ತಿಯಲ್ಲಿ ದೈಹಿಕ ಆರೋಗ್ಯ, ಸಾಮಥ್ರ್ಯ, ಸೌಂದರ್ಯ ಎಷ್ಟೇ ಇದ್ದರೂ ಅವನಿಗೆ ಮಾನಸಿಕ ಆರೋಗ್ಯ ಇಲ್ಲದಿದ್ದರೆ ಅವನು ಸಂತೋಷದಿಂದ ಜೀವನ ನಡೆಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಅಬ್ದುಲ್ ರಶೀದ್. ಕೆ. ಎಮ್ ಮಾತನಾಡಿ ಒಬ್ಬ ವ್ಯಕ್ತಿಗೆ ಮಾನಸಿಕ ಅನಾರೋಗ್ಯ ಯಾವ ರೀತಿಯಾಗಿ ಬರುತ್ತದೆ, ಅದಕ್ಕೆ ಕಾರಣವಾಗುವ ಪ್ರಮುಖ ಅಂಶಗಳಾವುವು ಮತ್ತು ಮಾನಸಿಕ ಅನಾರೋಗ್ಯ ಸಮಸ್ಯೆಗಳನ್ನು ಬಗೆಹರಿಸುವ ವಿಧಾನ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆ ಹೊಂದಿರುವ ವ್ಯಕ್ತಿಯನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗಬೇಕಿದೆ ಹಾಗೂ ಅವನನ್ನು ಆ ಸಮಸ್ಯೆಯಿಂದ ಹೊರತರಲು ಪ್ರಯತ್ನಿಸಬೇಕು ಎಂದರು.

ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೋಹಿನಿ ಬಿ ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ವನಜಾಕ್ಷಿ ಎ., ಮಂಡೆಕೋಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಜಯಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಶಾಲಾ ಮಕ್ಕಳು, ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಸಚಿನ್ ಸ್ವಾಗತಿಸಿ, ಗಣೇಶ್ ವಂದಿಸಿ, ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.