Friday, January 24, 2025
ಸುದ್ದಿ

ಸುವರ್ಣ ನ್ಯೂಸ್ ಕ್ಯಾಮರಾ ಮೆನ್ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡಿದ ಅಶೋಕ್ ಹಲಾಯಿ-ಕಹಳೆ ನ್ಯೂಸ್

ಬಂಟ್ವಾಳ: ಸಿದ್ದಕಟ್ಟೆ ನಿವಾಸಿ ಅಶೋಕ್ ಹಲಾಯಿ ಎಂಬಾತ ತಾನು ಸುವರ್ಣ ನ್ಯೂಸ್ ಕ್ಯಾಮರಾ ಮೆನ್ ಎಂದು ಹೇಳಿಕೊಂಡು ನಿನ್ನೆ ಎಸ್.ವಿ.ಎಸ್ ಶಿಕ್ಷಣ ಸಂಸ್ಥೆಗೆ ಹೋಗಿದ್ದಾನೆ. ಬಳಿಕ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಸುದ್ದಿ ಪ್ರಸಾರವಾಗದಂತೆ ಮಾಡಲು ತನಗೆ 50 ಸಾವಿರ ನೀಡುವಂತೆ ಬೇಡಿಕೆ ಇಟ್ಟಿದ್ದು, ಸಂಸ್ಥೆಯ ಆಡಳಿತ ಮಂಡಳಿಯವರು ಆತನ ಬ್ಲ್ಯಾಕ್ ಮೇಲ್‍ಗೆ ಮಣಿದು 50 ಸಾವಿರದ ಚೆಕ್ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆ ಬಳಿಕ ಶಿಕ್ಷಣ ಸಂಸ್ಥೆಯವರು ಸುವರ್ಣ ನ್ಯೂಸ್‍ನ ಮಂಗಳೂರು ವರದಿಗಾರರನ್ನ ಸಂಪರ್ಕಿಸಿದಾಗ ಅಶೋಕ್ ಹಲಾಯಿ ಎಂಬಾತ ನಕಲಿ ಪತ್ರಕರ್ತನಾಗಿದ್ದು ಆತ ಮಾಹಿತಿ ಕಲೆ ಹಾಕಿದಾಗ ಯೂ ಟ್ಯೂಬ್ ಚಾನೆಲ್ ನಡೆಸುತ್ತಿದ್ದಾನೆ ಎನ್ನುವುದು ತಿಳಿದುಬಂದಿದೆ. ಸುವರ್ಣ ನ್ಯೂಸ್‍ನ ಮಂಗಳೂರು ವರದಿಗಾರರು ಆತನಿಗೆ ಕರೆ ಮಾಡಿ ಪೊಲೀಸ್ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆ ಬಳಿಕ ಆತ ಆ 50 ಸಾವಿರದ ಚೆಕ್ ಅನ್ನು ಶಿಕ್ಷಣ ಸಂಸ್ಥೆಗೆ ವಾಪಾಸ್ ಕೊಟ್ಟು ಕ್ಷಮೆ ಕೋರಿ ಪೊಲೀಸ್ ದೂರು ನೀಡದಂತೆ ಅಂಗಲಾಚಿ ಕಾಲ್ಕಿತ್ತಿದ್ದಾನೆ. ಸದ್ಯ ಈತನ ವಿರುದ್ದ ಆಡಳಿತ ಮಂಡಳಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದೆ.