Sunday, January 26, 2025
ಸುದ್ದಿ

ಕೊನೆಗೂ 60 ದಿನಗಳಾದ ನಂತರ ಕೇಂದ್ರ ಸರಕಾರದಿಂದ ರಾಜ್ಯಕ್ಕೆ ನೆರೆ ಪರಿಹಾರ ನಿಧಿ ಬಿಡುಗಡೆ –ಕಹಳೆ ನ್ಯೂಸ್

ಬೆಂಗಳೂರು: ಕೊನೆಗೂ 60 ದಿನಗಳಾದ ನಂತರ ನಿನ್ನೆ ಕೇಂದ್ರ ಸರಕಾರ ರಾಜ್ಯಕ್ಕೆ 1,200 ಕೋಟಿ ರೂಪಾಯಿ ನೆರೆ ಪರಿಹಾರ ನಿಧಿ ನೀಡಿದ್ದು, ಇಂದು ಬೆಳಗ್ಗೆಯೇ ಹಣ ಬಿಡುಗಡೆ ಮಾಡುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ‘ಶನಿವಾರ ಬೆಳಿಗ್ಗೆಯೇ ನೆರೆ ಪರಿಹಾರ ಹಣವನ್ನು ಬಿಡುಗಡೆ ಮಾಡುವುದಾಗಿ ಹಣಕಾಸು ಸಚಿವಾಲಯ ನನಗೆ ಭರವಸೆ ನೀಡಿದೆ’ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್‍ಡಿಆರ್‍ಎಫ್) 1,813.75 ಕೋಟಿ ರೂಪಾಯಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಕರ್ನಾಟಕಕ್ಕೆ 1,200 ಕೋಟಿ ರೂಪಾಯಿ ಮತ್ತು ಬಿಹಾರಕ್ಕೆ 400 ಕೋಟಿ ರೂಪಾಯಿ ನೀಡಲಾಗಿದೆ. ಈ ಹಣವನ್ನು ಇಂದು (ಶನಿವಾರ) ಬೆಳ್ಳಿಗೆಯೇ ಬಿಡುಗಡೆ ಮಾಡುವುದಾಗಿ ಸಚಿವೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು