ಮುಂಬೈ: ವಾಣಿಜ್ಯ ನಗರಿ ಮುಂಬೈನ ಅರೆ ಪ್ರದೇಶದಲ್ಲಿ ಮೆಟ್ರೋ ಕಾಮಗಾರಿಗಾಗಿ ಸುಮಾರು 2,500ಕ್ಕೂ ಹೆಚ್ಚು ಮರಗಳನ್ನು ಕಡಿಯಲು ಹೈಕೋರ್ಟ್ ಅನುಮತಿ ನೀಡಿದೆ.
ಈ ಹಿನ್ನಲೆಯಲ್ಲಿ ರಾತ್ರೋರಾತ್ರಿ ಮರಗಳನ್ನು ಕಡಿಯಲು ಮುಂದಾದ ಅಧಿಕಾರಿಗಳ ವಿರುದ್ಧ ಪರಿಸರವಾದಿಗಳು ಹಾಗೂ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎಂದು ವರದಿಗಳು ತಿಳಿಸಿವೆ. ಮರಗಳನ್ನು ಕಡಿಯುವ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ 60 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮುಂಬೈ ಪೊಲೀಸ್ ವಕ್ತಾರರು ಹೇಳಿದ್ದಾರೆ.