Saturday, November 23, 2024
ಸುದ್ದಿ

Breaking News : ಮೈಸೂರು ದಸರಾ ಸ್ಫೋಟಕ್ಕೆ ಸಂಚು ; ಶಂಕಿತ ಉಗ್ರರ ಬಂಧನ – ಕಹಳೆ ನ್ಯೂಸ್

ಮೈಸೂರು, ಅ 6 : ನಾಡ ಹಬ್ಬ ದಸರಾ ಉತ್ಸವದ ಮೇಲೆ ಸ್ಫೋಟಕ ಕೃತ್ಯಕ್ಕೆ ಉಗ್ರರು ಸಂಚು ರೂಪಿಸಿದ್ದ ಶಂಕೆ ಮೇಲೆಗೆ ನಾಲ್ವರು ಶಂಕಿತ ಉಗ್ರರನ್ನು ರಾಷ್ಟ್ರೀಯ ಭದ್ರತಾ ಪಡೆ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಂಕಿತ ಉಗ್ರರು ಶ್ರೀರಂಗಪಟ್ಟಣದಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿದ್ದು, ಈ ಬಗ್ಗೆ ಮಾಹಿತಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನಲೆಯಲ್ಲಿ ಶೋಧಕಾರ್ಯ ನಡೆಸಿದ್ದ ಅಧಿಕಾರಿಗಳು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ನಾಲ್ವರು ಶಂಕಿತರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ಬಂಧನಕ್ಕೊಳಪಡಿಸಿರುವ ಶಂಕಿತರು ಪಾಕಿಸ್ತಾನದ ಕರಾಚಿ ಮೂಲದವರೆಂದು ವಿಚಾರಣೆ ವೇಳೆ ತಿಳಿದು ಬಂದಿದ್ದು, ಮೈಸೂರು ಸೇರಿದಂದೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿ ರವಾನಿಸಿದೆ ಎಂದು ಮೂಲಗಳು ತಿಳಿಸಿವೆ.